25 ವರ್ಷಗಳ ಹಿಂದೆ: ಮಂಗಳವಾರ ಜುಲೈ 9,1996

‘ಅರೆಕಾಲಿಕ ಬೋಧಕರ ನೇಮಕ ಸುಪ್ರೀಂ ಕೋರ್ಟ್ ನಿಷೇಧ’
ಬೆಂಗಳೂರು, ಜುಲೈ 8– ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಅರೆಕಾಲಿಕ ಉಪನ್ಯಾಸಕರ ನೇಮಕವನ್ನು ನಿಷೇಧಿಸಿ ಸರ್ಕಾರ ಆಜ್ಞೆ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಿ. ಸೋಮಶೇಖರ್ ವಿಧಾನ ಪರಿಷತ್ತಿನಲ್ಲಿ ಇಂದು ಸ್ಪಷ್ಟಪಡಿಸಿದರು.
‘ಇನ್ನು ಮುಂದೆ ಯಾವುದೇ ಕಾರಣಕ್ಕೆ ಅರೆಕಾಲಿಕ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರನ್ನು ನೇಮಿಸಿಕೊಳ್ಳಬಾರದು ಅಗತ್ಯವಿದ್ದರೆ ಒಂದೇ ಬಾರಿಗೆ ಕಾಯಂ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಇದನ್ನು ಪಾಲಿಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.