ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ 31-8-1996

Last Updated 30 ಆಗಸ್ಟ್ 2021, 19:45 IST
ಅಕ್ಷರ ಗಾತ್ರ

ಸಿಇಟಿ: ಮುಂದೂಡಿಕೆ ಪ್ರಶ್ನಿಸಿ ಮೇಲ್ಮನವಿ
ಬೆಂಗಳೂರು, ಆ. 30– ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪ್ರಕ್ರಿಯೆ ಯನ್ನು ಎರಡು ವಾರ ಮುಂದೂಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಂ.ಸಿ.ನಾಣಯ್ಯಇಂದು ಇಲ್ಲಿ ತಿಳಿಸಿದರು.

ಹೈಕೋರ್ಟ್ ಆದೇಶದಿಂದಾಗಿ ಬೇರೆ ದಾರಿಯೇ ಇಲ್ಲದೆ ಪ್ರವೇಶ ಸಂಬಂಧದಲ್ಲಿ ಇಂದಿನಿಂದ ಆರಂಭವಾಗಬೇಕಿದ್ದ ಸಂದರ್ಶನ ವನ್ನು ಮುಂದಕ್ಕೆ ಹಾಕಲೇಬೇಕಾಯಿತು. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆಗಿರುವ ತೊಂದರೆ ನಿವಾರಿ ಸಲು ಸಾಧ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.

ಖಾಸಗಿ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ನೀಡುತ್ತಾ ನಿಯಮ ಉಲ್ಲಂಘಿಸುತ್ತಿವೆ ಎಂದು ‘ಸಿಟಿಜನ್ ಆಫ್ ಇಂಡಿಯಾ ವೇದಿಕೆ’ಯ ಶಿವಭಾಸ್ಕರ ಸ್ವಾಮಿ ಎಂಬುವರು ಬರೆದ ಪತ್ರವನ್ನು ಹೈಕೋರ್ಟ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT