ಬುಧವಾರ, ಜೂನ್ 29, 2022
26 °C

25 ವರ್ಷಗಳ ಹಿಂದೆ: ಶುಕ್ರವಾರ, ಡಿಸೆಂಬರ್ 20,1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒತ್ತಡಕ್ಕೆ ಮಣಿದ ರಾವ್‌ ಕೊನೆಗೂ ನಿರ್ಗಮನ

ನವದೆಹಲಿ, ಡಿ. 19 (ಪಿಟಿಐ)– ಕಾಂಗ್ರೆಸ್‌ ಸಂಸದೀಯ ಪಕ್ಷದ ಕಾರ್ಯಕಾರಿಣಿಯ ಒತ್ತಡಕ್ಕೂ ಜಗ್ಗದೆ, ವಿರೋಧಿ ಗುಂಪಿನ ಆಗ್ರಹಕ್ಕೂ ಮಣಿಯದೆ, ಸಂಸದೀಯ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಬಲಾಬಲ ಪ್ರದರ್ಶನಕ್ಕೆ ಸಿದ್ಧರಾಗಿದ್ದ ಮಾಜಿ ಪ್ರಧಾನಿ ನರಸಿಂಹರಾವ್‌ ಅವರು ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ಕೊನೆ ಕ್ಷಣದಲ್ಲಿ ರಾಜೀನಾಮೆ ನೀಡುವುದರೊಂದಿಗೆ ಎರಡು ದಿನಗಳ ರಾಜಕೀಯ ನಾಟಕಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.

ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೇಂದ್ರ ಅಸ್ತು
ನವದೆಹಲಿ, ಡಿ. 19–
ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಖಾಸಗಿ ವಲಯದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಒಪ್ಪಿಗೆ ನೀಡಿದೆ ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಸಿ.ಎಂ. ಇಬ್ರಾಹಿಂ ಲೋಕಸಭೆಗೆ ತಿಳಿಸಿದರು.

ಚಿಕ್ಕಮಗಳೂರು ಕ್ಷೇತ್ರದ ಬಿ.ಎಲ್‌.ಶಂಕರ್‌ ಅವರಿಗೆ ಲಿಖಿತ ಉತ್ತರ ನೀಡಿರುವ ಸಚಿವರು, ಹಾಸನದಲ್ಲಿ ಏರ್‌ ಸ್ಟ್ರಿಪ್ಸ್‌ನ್ನು ಉನ್ನತೀಕರಿಸಲು ನಿರ್ಧರಿಸಿದೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು