ಎಚ್‌ಎಎಲ್‌ನಲ್ಲಿ ಅಂತರರಾಷ್ಟ್ರೀಯ ವಿಮಾನ ಟರ್ಮಿನಲ್
ನವದೆಹಲಿ, ಸೆ. 16– ಬರುವ ಜನವರಿ 1ರಿಂದ ಪ್ರಸ್ತುತ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿಯೇ ಪ್ರತ್ಯೇಕ ಅಂತರರಾಷ್ಟ್ರೀಯ ವಿಮಾನ ಟರ್ಮಿನಲ್ ಕಾರ್ಯಾರಂಭ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಅನಂತ್ ಕುಮಾರ್ ಇಂದು ಇಲ್ಲಿ ಪ್ರಕಟಿಸಿದರು.
ಈ ಮಧ್ಯೆ ಉದ್ದೇಶಿತ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಯ ಬಗೆಗೆ ಇರುವ ಹಲವಾರು ಸಮಸ್ಯೆಗಳ ಬಗೆಗೆ ಈ ತಿಂಗಳ 18ರಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಮತ್ತು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.