ಬೆಂಬಲ ಪ್ರಶ್ನೆ: ಕಾಂಗ್ರೆಸ್ ಕೋಟೆಯಲ್ಲಿ ಬಿರುಕು

ನವದೆಹಲಿ, ಮೇ 21 (ಪಿಟಿಐ)– ಕೇಂದ್ರದಲ್ಲಿ ಸರ್ಕಾರ ರಚನೆಗೆ ಸಂಯುಕ್ತ ರಂಗಕ್ಕೆ ಕಾಂಗ್ರೆಸ್ ಬೆಂಬಲ ನೀಡುವುದರ ಬಗ್ಗೆ ವಿವಿಧ ರಾಜ್ಯಗಳ ಕಾಂಗ್ರೆಸ್ ಘಟಕಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷವು ಸಂಯುಕ್ತ ರಂಗಕ್ಕೆ ಕಾಂಗ್ರೆಸ್ ಬೆಂಬಲ ನೀಡುವುದರ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿ, ಪಕ್ಷದ ಅಧ್ಯಕ್ಷ ಪಿ.ವಿ.ನರಸಿಂಹ ರಾವ್ ಅವರಿಗೆ ಇಂದು ಬಹಿರಂಗ ಪತ್ರ ಬರೆಯುವುದರೊಂದಿಗೆ ಕಾಂಗ್ರೆಸ್ ಪಕ್ಷದಲ್ಲಿನ ಒಳಗುದಿ ಹೊರಬಿದ್ದಿದೆ.

ಈ ನಡುವೆ, ಸಂಯುಕ್ತ ರಂಗದ ಪ್ರಮುಖ ಪಕ್ಷವಾಗಿರುವ ತೆಲುಗುದೇಶಂನಲ್ಲಿಯೂ ಭಿನ್ನಮತ ಹೊಗೆಯಾಡತೊಡಗಿದೆ. ಸಂಯುಕ್ತ ರಂಗಕ್ಕೆ ಸರ್ಕಾರ ರಚನೆಗೆ ಬೆಂಬಲ ನೀಡಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ದೆಹಲಿಯಲ್ಲಿ ಕಾರ್ ಬಾಂಬ್ ಸ್ಫೋಟ: 25 ಜನ ಸಾವು

ನವದೆಹಲಿ, ಮೇ 21 (ಯುಎನ್‌ಐ)– ರಾಜಧಾನಿಯ ಜನನಿಬಿಡ ಪ್ರದೇಶವಾದ ದಕ್ಷಿಣ ದೆಹಲಿಯ ಲಜಪತ್ ನಗರ ಮಾರುಕಟ್ಟೆ ಸಂಕೀರ್ಣದಲ್ಲಿ ಇಂದು ಸಂಜೆ ಭಾರಿ ಬಾಂಬೊಂದು ಸ್ಫೋಟಿಸಿ ಕನಿಷ್ಠ 25 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.