ಸೋಮವಾರ, ಅಕ್ಟೋಬರ್ 18, 2021
27 °C

25 ವರ್ಷಗಳ ಹಿಂದೆ| ಗುರುವಾರ ಸೆಪ್ಟೆಂಬರ್‌ 19, 1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭೆಗೆ ದೇವೇಗೌಡರ ಅವಿರೋಧ ಆಯ್ಕೆ ಖಚಿತ

ಬೆಂಗಳೂರು, ಸೆ. 18– ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಮರು ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಗೌಡರು ಸ್ಪರ್ಧಾ ಕಣದಲ್ಲಿರುವ ಏಕೈಕ ಅಭ್ಯರ್ಥಿಯಾಗಿದ್ದು ಅವರ ಅವಿರೋಧ ಆಯ್ಕೆ ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಅಂತಿಮ ಗಳಿಗೆಗೆ ಒಂದು ಗಂಟೆ ಮುಂಚಿತವಾಗಿ ನಾಲ್ಕು ಸೆಟ್‌ಗಳಲ್ಲಿ ಅವರು ನಾಮಪತ್ರ ಸಲ್ಲಿಸಿದರು. ನಾಮ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಶನಿವಾರ (ಸೆ.21) ಅಧಿಕೃತವಾಗಿ ಆಯ್ಕೆ ಘೋಷಣೆಯಾಗಲಿದೆ.

ದೇವೇಗೌಡರ ವಿರುದ್ಧ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ಹೆಗಡೆ ಅವರ ಹೇಳಿಕೆಯಿಂದ ಉಂಟಾಗಿದ್ದ ಗೊಂದಲ, ಅನಿಶ್ಚತತೆಗೆ ತೆರೆಬಿದ್ದು ಗೌಡರ ಆಯ್ಕೆ ಸುಗಮವಾದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು