ಮಂಗಳವಾರ, ಸೆಪ್ಟೆಂಬರ್ 21, 2021
29 °C

50 ವರ್ಷಗಳ ಹಿಂದೆ: ಬುಧವಾರ 28.7.1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಲ್ಲಿ ಅಭಾವ ಸ್ಥಿತಿ: ಪರಿಹಾರ ಕ್ರಮಗಳಿಗೆ ಅಧಿಕಾರಿಗಳಿಗೆ ಆದೇಶ

ಕಲ್ಬುರ್ಗಿ, ಜುಲೈ 27– ಮಳೆ ಅಭಾವ ದಿಂದಾಗಿ ಬೀದರ್, ಕಲ್ಬುರ್ಗಿ, ಕೋಲಾರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ರಾಯಚೂರು ಹಾಗೂ ಬಳ್ಳಾರಿ ಭಾಗಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವುದು ವರದಿಯಾಗಿರುವುದಾಗಿ ರಾಜ್ಯಪಾಲ
ಶ್ರೀ ಧರ್ಮವೀರ ಅವರು ಇಂದು ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.

ದೀರ್ಘಾವಧಿ ಹಾಗೂ ಅಲ್ಪಾವಧಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಜೋಳ ಮುಖ್ಯ ಆಹಾರ ಆಗಿರುವ ಜನರ ಅಗತ್ಯಗಳನ್ನು ಪೂರೈಸಲು ಮಧ್ಯಪ್ರದೇಶ, ರಾಜಸ್ಥಾನಗಳಿಂದ ಜೋಳವನ್ನು ತರಿಸಿಕೊಳ್ಳಲು ಪ್ರಯತ್ನಿಸಲಾಗುವುದೆಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು