ಶನಿವಾರ, ಸೆಪ್ಟೆಂಬರ್ 25, 2021
22 °C

50 ವರ್ಷಗಳ ಹಿಂದೆ: ಭಾನುವಾರ, 12.9.1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಲು ಬೆಳಗಾವಿ ಸಾಹಿತ್ಯ ಸಮ್ಮೇಳನ ಒತ್ತಾಯ

ಬೆಳಗಾವಿ, ಸೆ. 11– ಕನ್ನಡ ನಾಡಿನಲ್ಲಿ ಕನ್ನಡದ ಸ್ಥಾನಮಾನದ ಏಳಿಗೆಗಾಗಿ ಮೀಸಲಾದ ಒಂದು ವ್ಯವಸ್ಥಿತ ಚಳವಳಿಯ ಅಗತ್ಯ ಈಗ ಎಂದಿಗಿಂತಲೂ ಹೆಚ್ಚಾಗಿದೆ ಎಂದು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಹಾ.ಮಾ.ನಾಯಕ್ ಅವರು ಇಂದು ಸಂಜೆ ಇಲ್ಲಿ ಹೇಳಿದರು.

ತಿಳಕವಾಡಿಯ ಕಲಾಮಂದಿರದಲ್ಲಿ ಪ್ರಾರಂಭವಾದ ಎರಡು ದಿನಗಳ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ ಮಾಡಿದ ಶ್ರೀಯುತರು, ಹಿಂದಿ ಹಾಗೂ ಇಂಗ್ಲಿಷ್‌ ಪ್ರಭಾವ ಬೆಳೆಯುತ್ತಿರುವ ಬಗ್ಗೆ ವ್ಯಸನ ವ್ಯಕ್ತಪಡಿಸಿ ಇದರಿಂದ ಕನ್ನಡದ ಅಸ್ತಿತ್ವಕ್ಕೆ  ಗಂಡಾಂತರ ಬರುವಂತಿದೆ. ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ರ್ಯಸಿಗಬೇಕಾದ ಅಗತ್ಯದ ಕುರಿತು ಒತ್ತಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು