ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

50 ವರ್ಷಗಳ ಹಿಂದೆ: ಕಪಿಲಾ ಯೋಜನೆ ಜಮೀನು ಅಭಿವೃದ್ಧಿಗೆ ರೈತರಿಗೆ ಸಾಲ

Published 23 ಮೇ 2024, 0:30 IST
Last Updated 23 ಮೇ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು, ಮೇ 22– ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನಲ್ಲಿ 2,000 ಎಕರೆಗಳಷ್ಟು ಜಮೀನನ್ನು ಸಾಗುವಳಿಗೆ ಯೋಗ್ಯವಾಗುವಂತೆ ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಸಹಕಾರಿ ಭೂ ಅಭಿವೃದ್ಧಿ ಬ್ಯಾಂಕ್ ಒಂದು ಯೋಜನೆಯನ್ನು ರೂಪಿಸಿದೆ. 

ಮುಖ್ಯವಾಗಿ ಆ ತಾಲ್ಲೂಕಿನಲ್ಲಿ ಕಪಿಲಾ ಯೋಜನೆ ವ್ಯಾಪ್ತಿಯಲ್ಲಿ ಬರುವ ರೈತರಿಗೆ ತಮ್ಮ ಜಮೀನುಗಳನ್ನು ಅಭಿವೃದ್ಧಿಪಡಿಸಲು ಸಾಲ ನೀಡುವುದಕ್ಕಾಗಿ ಈ ಯೋಜನೆ ರೂಪಿತವಾಗಿದೆ. 

ಇದಕ್ಕಾಗಿ ಕೃಷಿಕರಿಗೆ ಸಾಲ ನೀಡಲು ಪ್ರಥಮವಾಗಿ ಒಂದು ಲಕ್ಷ ರೂಪಾಯಿಗಳನ್ನು ಹೆಗ್ಗಡದೇವನಕೋಟೆ ತಾಲ್ಲೂಕಿನ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿಗೆ ಒದಗಿಸಲಾಗಿದೆ. ಎರಡು ವರ್ಷಗಳ ಅವಧಿಯಲ್ಲಿ 2,000 ಎಕರೆ ಪ್ರದೇಶವನ್ನು ಅಭಿವೃದ್ಧಿಗೊಳಿಸಲು ಈ ಯೋಜನೆಯಲ್ಲಿ ಉದ್ದೇಶಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT