ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

50 ವರ್ಷಗಳ ಹಿಂದೆ | ಕೃಷ್ಣಾ ಮೇಲ್ದಂಡೆ ಯೋಜನೆ: ಕೇಂದ್ರಕ್ಕೆ ರಾಜ್ಯದ ಒತ್ತಾಯ

Published 23 ಮೇ 2024, 23:30 IST
Last Updated 23 ಮೇ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು, ಮೇ 23– ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ಕಂದಾಯ ಸಚಿವರಾದ ಎನ್‌. ಹುಚ್ಚಮಾಸ್ತಿಗೌಡ ಅವರು ಇಂದು ವಿಧಾನ‍ಪರಿಷತ್ತಿನಲ್ಲಿ ತಿಳಿಸಿದರು.

ಗೋವಿಂದ ಪಿ. ಒಡೆಯರಾಜ್ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಅವರ ಗೈರು
ಹಾಜರಿಯಲ್ಲಿ ಉತ್ತರ ನೀಡಿದ ಸಚಿವರು, ಈ ಸಂಬಂಧ ಕೇಂದ್ರ ತನ್ನ ನಿರ್ಧಾರವನ್ನು ತಿಳಿಸಿಲ್ಲ ಎಂದು ಹೇಳಿ, ರಾಜ್ಯದ 5ನೇ ಯೋಜನೆಯಲ್ಲಿ ಈ ಯೋಜನೆಗಾಗಿ 67 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದರು.

ವಿಶೇಷ ರೈಲಿನಲ್ಲಿ ರಾಜ್ಯಕ್ಕೆ ಹತ್ತು ಸಾವಿರ ಟನ್ ಕಲ್ಲಿದ್ದಲು

ಬೆಂಗಳೂರು, ಮೇ 23– ಹತ್ತು ಸಾವಿರ ಟನ್ ಕಲ್ಲಿದ್ದಲು ಹೊತ್ತ ವಿಶೇಷ ರೈಲು ರಾಜ್ಯಕ್ಕೆ ಬರುತ್ತಿದೆ ಎಂದು ಕೈಗಾರಿಕಾ ಸಚಿವ ಎಸ್.ಎಂ. ಕೃಷ್ಣ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಎಂ.ವಿ. ವೆಂಕಟಪ್ಪ ಅವರ ಅಲ್ಪ ಕಾಲಾವಧಿ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಭದ್ರಾವತಿಯಲ್ಲಿನ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕಲ್ಲಿದ್ದಲಿನ ತೀವ್ರ ಕೊರತೆಯನ್ನು ಎದುರಿಸುತ್ತಿರುವುದು ನಿಜ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT