ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಮುಷ್ಕರ, ಲಾಕೌಟ್‌ಗಳ ಬಗ್ಗೆ ಲೋಕಸಭೆ ಕಳವಳ

Published 20 ಡಿಸೆಂಬರ್ 2023, 23:30 IST
Last Updated 20 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಮುಷ್ಕರ, ಲಾಕೌಟ್‌ಗಳ ಬಗ್ಗೆ ಲೋಕಸಭೆ ಕಳವಳ

ನವದೆಹಲಿ, ಡಿ. 20– ರಾಷ್ಟ್ರದಲ್ಲಿ ಕೈಗಾರಿಕಾ ಮುಷ್ಕರಗಳು ಮತ್ತು ಲಾಕೌಟ್‌ಗಳು ಹೆಚ್ಚುತ್ತಿರುವುದರ ಬಗ್ಗೆ ಇಂದು ಲೋಕಸಭೆಯ ಸದಸ್ಯರು ತಮ್ಮ ಕಳವಳ ವ್ಯಕ್ತಪಡಿಸಿದರಲ್ಲದೆ, ಅದನ್ನು ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ ತಪ್ಪಿಸಬಹುದಾದ ಪರಿಣಾಮಕಾರಿ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ರಾಷ್ಟ್ರಪತಿ ವಿ.ವಿ.ಗಿರಿ ಹಾಗೂ ಪ್ರಧಾನಿ ಇಂದಿರಾ ಗಾಂಧಿಯವರು ಸಲಹೆ ಮಾಡಿ ರುವಂತೆ 5ನೇ ಯೋಜನೆಯಲ್ಲಿ ಮುಷ್ಕರಗಳು ಮತ್ತು ಲಾಕೌಟ್‌ಗಳ ಮೇಲೆ ನಿರ್ಬಂಧ ವಿಧಿಸಲು ಆಡಳಿತ ಪಕ್ಷದ ಕೆಲವು ಸದಸ್ಯರು ಸಲಹೆ ನೀಡಿದರು. ನಿರ್ಬಂಧ ವಿಧಿಸಲು ಕಾರ್ಮಿಕ ಕಾನೂನುಗಳನ್ನು ಸೂಕ್ತವಾಗಿ ಬದಲಾಯಿಸಬೇಕೆಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT