ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ವರ್ಷಗಳ ಹಿಂದೆ: ಒಂದು ವಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗ

Published 22 ಡಿಸೆಂಬರ್ 2023, 23:30 IST
Last Updated 22 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಒಂದು ವಾರದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಿಯೋಗ

ಬೆಂಗಳೂರು, ಡಿ. 22– ಮುಖ್ಯಮಂತ್ರಿ ಅರಸು ನಾಯಕತ್ವದಲ್ಲಿ ರಾಜ್ಯದ ವಿಧಾನಮಂಡಲದ ನಿಯೋಗವೊಂದು ಇನ್ನೊಂದು ವಾರದಲ್ಲಿ ದೆಹಲಿಗೆ ತೆರಳಿ ಮಹಾಜನ್ ವರದಿಯನ್ನು ಕಾರ್ಯರೂಪಕ್ಕೆ ತರಬೇಕೆಂಬ ಬೇಡಿಕೆಯನ್ನು ಪ್ರತಿಪಾದಿಸಿ, ಪ್ರಧಾನಿ ಹಾಗೂ ಕೇಂದ್ರದ ಇತರ ನಾಯಕರಿಗೆ ಮನವಿ ಸಲ್ಲಿಸಲಿದೆ. 

ಮುಖ್ಯಮಂತ್ರಿ ಅರಸು ಅವರು ಇಂದು ಸಂಜೆ ವಿಧಾನಸೌಧದಲ್ಲಿ ವಿರೋಧ ಪಕ್ಷಗಳ ನಾಯಕರೊಡನೆ ಗಡಿ ವಿವಾದದ ಕುರಿತು ಮತ್ತೆ ಚರ್ಚೆ ನಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರು ಅನುಭವಿಸಿರುವ 10–12 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ತುಂಬಿಕೊಡಬೇಕು ಎಂದು ಕೇಂದ್ರವನ್ನು ನಿಯೋಗ ಒತ್ತಾಯ ಮಾಡಲಿದೆ. 

ಸಂಜೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಎಚ್.ಡಿ. ದೇವೇಗೌಡ, ಕಮ್ಯುನಿಸ್ಟ್‌ ಪಕ್ಷದ ಎಂ.ಎಸ್. ಕೃಷ್ಣನ್, ಸೋಷಲಿಸ್ಟ್ ಪಕ್ಷದ ಕಾಗೋಡು ತಿಮ್ಮಪ್ಪ, ಕ್ರಾಂತಿಕಾರಿ ಪಕ್ಷದ ಎಸ್. ಬಂಗಾರಪ್ಪ ಹಾಗೂ ಟಿ.ಆರ್. ಶಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT