ಬುಧವಾರ, ಮಾರ್ಚ್ 29, 2023
31 °C

50 ವರ್ಷಗಳ ಹಿಂದೆ: ಗುರುವಾರ 08.07.1971

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಗಳನ್ನು ಉರುಳಿಸುವ ಆಟ ಸಾಕು– ಇಂದಿರಾಗೆ ಜಯಪ್ರಕಾಶ್ ಬುದ್ಧಿವಾದ
ಪಾಟಲೀಪುರ, ಜುಲೈ 7–
ಸರ್ಕಾರಗಳನ್ನು ಉರುಳಿಸುವ ಆಟ ಇನ್ನು ಸಾಕು ಎಂದು ಸರ್ವೋದಯ ನಾಯಕ ಜಯಪ್ರಕಾಶ್ ನಾರಾಯಣ್ ಅವರು ರಾಜಕಾರಣಿಗಳಿಗೆ ವಿಶೇಷವಾಗಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ಬುದ್ಧಿ ಹೇಳಿದ್ದಾರೆ.

ಮಂಗಳವಾರ ಇಲ್ಲಿ ಬಾಂಗ್ಲಾ ದೇಶ ಕುರಿತ ಎರಡು ದಿನಗಳ ಬಹಿರಂಗ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಅಸ್ಥಿರ ರಾಜಕೀಯ ಪರಿಸ್ಥಿತಿ ಬಾಂಗ್ಲಾ ದೇಶದ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಾಷ್ಟ್ರದ ಸಮಸ್ಯೆಗಳನ್ನು ಉಲ್ಬಣಗೊಳಿಸುವ ಸಂಭವವಿದೆಯೆಂದು ನುಡಿದರು.

‘ಸರ್ಕಾರಗಳನ್ನು  ಉರುಳಿಸುವ ಆಟವನ್ನು ನಿಲ್ಲಿಸುವಂತೆ ನಾನು ಎಲ್ಲ ರಾಜಕೀಯ ಪಕ್ಷಗಳ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ತಿಳಿಸಿದರು.

 ‘ಶ್ರೀಮತಿ ಇಂದಿರಾ ಗಾಂಧಿಯವರು ಸಾಕಷ್ಟು ಸರ್ಕಾರಗಳನ್ನು ಉರುಳಿಸಿದ್ದಾರೆ. ಅಷ್ಟಕ್ಕೆ ಅವರು ತೃಪ್ತಿ ಪಟ್ಟುಕೊಳ್ಳಬೇಕು’ ಎಂದು ಜಯಪ್ರಕಾಶ್ ನಾರಾಯಣ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು