ಬೆಂಗಳೂರು, ಜ. 22– ಬೆಂಗಳೂರು–ಮೈಸೂರು ಕಾರಿಡಾರ್ ಹೆದ್ದಾರಿ ಕಾಮಗಾರಿ ಮುಂದಿನ ತಿಂಗಳು ಪ್ರಾರಂಭವಾಗಲಿದ್ದು, ಈಗಿರುವ ಹೆದ್ದಾರಿಯನ್ನು ಅಂತರರಾಷ್ಟ್ರೀಯಮಟ್ಟಕ್ಕೆ ಏರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಇಲ್ಲಿ ತಿಳಿಸಿದರು.

ಎಂಟೂವರೆ ಕೋಟಿ ರೂಪಾಯಿ ವೆಚ್ಚದ ಶಿವಾಜಿನಗರದ ಅತ್ಯಾಧುನಿಕ ಬಸ್ ನಿಲ್ದಾಣವನ್ನು ಉದ್ಘಾಟಿಸಿದ ಅವರು, ‘ಈಗಿರುವ ಬೆಂಗಳೂರು–ಮೈಸೂರು ಹೆದ್ದಾರಿಯನ್ನು ಅಂತರರಾಷ್ಟ್ರೀಯಮಟ್ಟದ ರಸ್ತೆಯನ್ನಾಗಿಸಲು ಸಮಗ್ರ ಯೋಜನೆಯೊಂದನ್ನು ಸರ್ಕಾರ ರೂಪಿಸಿದೆ’ ಎಂದು ಪ್ರಕಟಿಸಿದರು.

ಉಪಗ್ರಹ ಸೇವೆ ಬಳಕೆಗೆ ಇಸ್ರೊ ಜತೆ ಒಪ್ಪಂದ

ಬೆಂಗಳೂರು, ಜ. 22– ಜನಸಾಮಾನ್ಯರ ಜೀವನ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಉಪಗ್ರಹ ಸೇವೆಯನ್ನು ಬಳಸಿಕೊಳ್ಳಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಜೊತೆ ಏಳು ಒಪ್ಪಂದಗಳಿಗೆ ಸಹಿ ಹಾಕಿತು.

ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಇಸ್ರೊ ಅಧ್ಯಕ್ಷ ಡಾ. ಕೆ. ಕಸ್ತೂರಿ ರಂಗನ್ ಅವರ ಉಪಸ್ಥಿತಿಯಲ್ಲಿ ರಾಜ್ಯ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ಹಾಗೂ ಇಸ್ರೊ ವೈಜ್ಞಾನಿಕ ಕಾರ್ಯದರ್ಶಿ ಕೆ.ಆರ್. ಶ್ರೀಧರಮೂರ್ತಿ ರೂ. 35 ಕೋಟಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.