ಬೆಂಗಳೂರು, ಮೇ 24– ಗೆಜೆಟೆಡ್ ‘ಎ’ ಮತ್ತು ‘ಬಿ’ ಗುಂಪಿನ ಹುದ್ದೆಗಳು, ‘ಸಿ’ ದರ್ಜೆ ಹಾಗೂ ಸಿಬ್ಬಂದಿ ವರ್ಗದ ಒಟ್ಟು 2,626 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿದ್ದ ಲಿಖಿತ, ಮೌಖಿಕ ಪರೀಕ್ಷೆಗಳ ಪ್ರಕ್ರಿಯೆಯನ್ನು ಗ್ರಾಮೀಣ ಕೃಪಾಂಕ ನೀಡದೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಹುದ್ದೆಗಳಿಗೆ ನಡೆಯುತ್ತಿದ್ದ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ನೀಡಿ ರುವ ತಡೆಯಾಜ್ಞೆಯನ್ನು ಹಿಂತೆಗೆದು ಕೊಂಡು ಈ ಪ್ರಕ್ರಿಯೆ ಮುಗಿಯುವ ವರೆಗೆ ಮಾತ್ರ ಕರ್ನಾಟಕ ಮೀಸಲಾತಿ ಕಾಯ್ದೆ–2000 ಅನ್ವಯಿಸಬಾರದು ಎಂದು ಇತ್ತೀಚೆಗೆ ನಡೆದ ಸರ್ವ ಪಕ್ಷ ಗಳ ಸಭೆ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸಭೆ ಈ ನಿರ್ಣಯ ತಗೆದುಕೊಂಡಿದೆ.

ಸರ್ಕಾರ ಎಲ್ಲ ವರ್ಗಗಳ ಹಾಗೂ ದರ್ಜೆಗಳ ಹುದ್ದೆಗಳಿಗೆ ನೇಮಕ ಮಾಡಿ ಕೊಳ್ಳುವಾಗ ಗ್ರಾಮಾಂತರ ಪ್ರದೇಶದ ಅಭ್ಯರ್ಥಿಗಳಿಗೆ ಶೇ 10ರಷ್ಟು ಕೃಪಾಂಕ ನೀಡುತ್ತಿದ್ದುದು ಸಂವಿಧಾನಬಾಹಿರ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.