ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ: ಶುಕ್ರವಾರ, 5–1–1996

Last Updated 4 ಜನವರಿ 2021, 19:30 IST
ಅಕ್ಷರ ಗಾತ್ರ

ನ್ಯಾಯಮಂಡಲಿ ಕಲಾಪ ಸ್ಥಗಿತಕ್ಕೆ ರಾಜ್ಯದ ಅರ್ಜಿ

ಬೆಂಗಳೂರು, ಜ. 4– ಕೇಂದ್ರ ಸರ್ಕಾರ ರಾಷ್ಟ್ರೀಯ ಜಲ ನೀತಿ ಪ್ರಕಟಿಸುವವರೆಗೂ ಕಲಾಪಗಳನ್ನು ಮುಂದಕ್ಕೆ ಹಾಕಲು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಮುಂದೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ.

ಈ ವಿಷಯವನ್ನು ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು, ಪ್ರಧಾನಿ ಭರವಸೆ ಹಿನ್ನೆಲೆಯಲ್ಲಿ, ಶತಮಾನಗಳ ಕಾವೇರಿ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ಆಶಾಭಾವನೆಗೆ ಹೆಚ್ಚಿನ ಮಹತ್ವ ನೀಡಿ ತಮಿಳುನಾಡಿಗೆ ನೀರು ಬಿಡಲು ತೀರ್ಮಾನಿಸಲಾಯಿತು ಎಂದು ನಿನ್ನೆಯ ಸರ್ವ ಪಕ್ಷಗಳ ಸಭೆಯ ನಿರ್ಣಯಗಳನ್ನು ಬಲವಾಗಿ ಸಮರ್ಥಿಸಿಕೊಂಡರು.

ಕೈಗಾ ವಿದ್ಯುತ್‌ ಮಾರ್ಗ ಸ್ಥಗಿತ ಕೋರಿ ರಿಟ್‌

ಬೆಂಗಳೂರು, ಜ. 4– ಉತ್ತರ ಕನ್ನಡ ಜಿಲ್ಲೆಯಲ್ಲಿನ ‘ಕೈಗಾ ವಿದ್ಯುತ್‌ ಸಾಗಣೆ ಮಾರ್ಗ’ ನಿರ್ಮಾಣ ಕಾರ್ಯ ನಿಲ್ಲಿಸುವಂತೆ ಆದೇಶಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಈ ಯೋಜನೆಯು ಅರಣ್ಯ ಸಂರಕ್ಷಣೆ ಕಾಯ್ದೆ ಮತ್ತು ನಿಯಮಗಳಿಗೆ ವಿರೋಧಿ ಆಗಿರುವುದರಿಂದ, ಸಂಪದ್ಭರಿತ ಅರಣ್ಯವನ್ನು ರಕ್ಷಿಸುವ ದೃಷ್ಟಿಯಿಂದ ಇಡೀ ಯೋಜನೆಯನ್ನು ಪುನರ್‌ಪರಿಶೀಲಿಸುವಂತೆ ಆದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT