ಬುಧವಾರ, ನವೆಂಬರ್ 25, 2020
24 °C

ಪ್ರಜಾವಾಣಿ 25 ವರ್ಷಗಳ ಹಿಂದೆ: ಭಾನುವಾರ 12/11/1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

25 ವರ್ಷಗಳ ಹಿಂದೆ

ಮೈತ್ರಿಗೆ ಜನತಾ ದಳ ನಿರ್ಧಾರ

ನವದೆಹಲಿ, ನ. 11 (ಯುಎನ್‌ಐ, ಪಿಟಿಐ)– ಬರುವ ಲೋಕಸಭೆ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ನಿರ್ಧಾರವನ್ನು ಸದ್ಯಕ್ಕೆ ಕೈಬಿಟ್ಟಿದೆ.

ಆದರೆ ಬಹುಜನ ಸಮಾಜ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯನ್ನು ಸದ್ಯಕ್ಕೆ ಕೈಬಿಟ್ಟಿದೆ.

ಶುಕ್ರವಾರ ಮಧ್ಯರಾತ್ರಿಯವರೆಗೆ ನಡೆದ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಪಕ್ಷದ ಕೈಗೊಂಡ ನಿರ್ಧಾರವನ್ನು ಅಧ್ಯಕ್ಷ ಎಸ್‌.ಆರ್‌. ಬೊಮ್ಮಾಯಿ ಅವರು ಇಂದು ಪ್ರಕಟಿಸಿದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಅಟಲ್‌ಗೆ ಪ್ರಧಾನಿ ಪಟ್ಟ’

ಮುಂಬೈ, ನ. 11 (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿರಿಯ ನಾಯಕ ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗುತ್ತಾರೆ ಎಂದು ಪಕ್ಷದ ಅಧ್ಯಕ್ಷ ಎಲ್‌.ಕೆ. ಅಡ್ವಾಣಿ ಇಂದು ರಾತ್ರಿ ಇಲ್ಲಿ ಘೋಷಿಸಿದರು.

ಕೇಂದ್ರ ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್‌ನಲ್ಲಿ ಅವರು ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಈ ವಿಷಯವನ್ನು ದೇಶದ ಮೂಲೆ ಮೂಲೆಗೆ ತಲುಪಿಸುವಂತೆ ಪಕ್ಷದ ಕಾರ್ಯಕರ್ತರು ಕರೆ ನೀಡಿದರು.

ಈ ಹಂತದಲ್ಲಿ ಮಾತನಾಡಿದ ವಾಜಪೇಯಿ ಅವರು, ಪ್ರಧಾನಿ ಯಾತಾಗುತ್ತಾರೆ ಎಂದು ವಿಷಯದತ್ತ ಗಮನ ಕೊಡದೆ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುವುದು ಪಕ್ಷಕ್ಕೆ ಈಗಿನ ಸಂದರ್ಭದಲ್ಲಿ ಹೆಚ್ಚು ಮಹತ್ವಪೂರ್ಣ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು