ಗುತ್ತಿಗೆ ವೈದ್ಯ ಸಿಬ್ಬಂದಿಯ ಸೇವೆ ಕಾಯಂ: ಮಾಲಕರೆಡ್ಡಿ

ಶಿವಮೊಗ್ಗ, ಮೇ 11– ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು 3 ವರ್ಷಗಳ ಕಾಲ ಚೆನ್ನಾಗಿ ಕಾರ್ಯ ನಿರ್ವಹಿಸುವ ವೈದ್ಯ ಸಿಬ್ಬಂದಿಯ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು
ಆರೋಗ್ಯ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ತಿಳಿಸಿದರು.

ಕರ್ನಾಟಕ ರಾಜ್ಯದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ಸಂಘವು ಏರ್ಪಡಿಸಿದ್ದ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನೇಮಕಾತಿ ಪ್ರಕ್ರಿಯೆ ತುಂಬ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ವಿಕೇಂದ್ರೀಕರಣಗೊಳಿಸಿ ಜಿಲ್ಲಾಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಹಿಳ್ಳಿ ಬ್ಯಾರೇಜ್ವರೆಗೆ ಭೀಮಾ ನೀರು: ಮಹಾರಾಷ್ಟ್ರ ಭರವಸೆ

ವಿಜಾಪುರ, ಮೇ 11– ಮಹಾರಾಷ್ಟ್ರ ಸರ್ಕಾರ ಉಜಿನಿ ಅಣೆಕಟ್ಟೆಯಿಂದ ಭೀಮಾ ನದಿಗೆ ಬಿಟ್ಟಿರುವ ನೀರನ್ನು
ಹಿಳ್ಳಿ ಬ್ಯಾರೇಜ್ವರೆಗೆ ಮಾತ್ರ ಹರಿಸ
ಲಾಗುವುದು ಎಂದು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಆನಂದರಾವ್ ದೇವಕತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.