25 ವರ್ಷಗಳ ಹಿಂದೆ; ಭಾನುವಾರ, 15–4–2001

ಬೆಂಗಳೂರು, ಏ. 14– ಬೆಂಗಳೂರಿನ ನೂರು ದಿನಸಿ ಅಂಗಡಿಗಳಲ್ಲಿ ಚಿಲ್ಲರೆಯಾಗಿ ಬಿಯರ್ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲು ನಿರ್ಧರಿಸಿದ್ದ ರಾಜ್ಯ ಸರ್ಕಾರ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾದ ಇಂದು ತನ್ನ ಉದ್ದೇಶಿತ ಪ್ರಸ್ತಾವವನ್ನು ಹಿಂತೆಗೆದುಕೊಂಡಿತು.

ವಿಧಾನಸೌಧದ ಮುಂಭಾಗದಲ್ಲಿ ಸಂಜೆ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಅವರ 110ನೇ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಜನಸಾಮಾನ್ಯರಿಂದ ವಿಶೇಷವಾಗಿ ಮಹಿಳೆಯರಿಂದ ಈ ಬಗ್ಗೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹತ್ವದ ದಿನವಾದ ಇಂದು ಬಿಯರ್ ಮಾರಾಟಕ್ಕೆ ಅನುಮತಿ ನೀಡುವ ಪ್ರಸ್ತಾವವನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಪ್ರಕಟಿಸಿದರು.

ರಾಜ್ಯಕ್ಕೆ ಕೇಂದ್ರದ 100 ಮೆ.ವಾ. ಹೆಚ್ಚುವರಿ ವಿದ್ಯುತ್

ಬೆಂಗಳೂರು, ಏ. 14– ಕೇಂದ್ರದಿಂದ ಈಗ ರಾಜ್ಯಕ್ಕೆ ಪೂರೈಕೆಯಾಗುತ್ತಿರುವ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ 100 ಮೆಗಾವಾಟ್ ವಿದ್ಯುತ್ ಪೂರೈಸಲಾಗುವುದು ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಜಯವಂತಿ ಮೆಹತಾ ಇಂದು ಇಲ್ಲಿ ಪ್ರಕಟಿಸಿದರು.

ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಕರ್ನಾಟಕವನ್ನು ನಾವು ಕತ್ತಲಲ್ಲಿ ಇಡುವುದಿಲ್ಲ. ಸಾಧ್ಯವಾದಷ್ಟು ಬೇಗನೆ ಹೆಚ್ಚುವರಿಯಾಗಿ 100 ಮೆ.ವಾ. ವಿದ್ಯುತ್ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.