ಸಾಮೂಹಿಕ ನಿರ್ಧಾರದ ಮೇಲೆ ಹೊಸ ನೇಮಕ

ನವದೆಹಲಿ, ಏ. 9– ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂದಿನ ಅಧ್ಯಕ್ಷರನ್ನು ಸಾಮೂಹಿಕ ನಿರ್ಧಾರದ ಮೂಲಕ ನೇಮಕ ಮಾಡಲು ನಿರ್ಧರಿಸಿರುವ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು, ಇದಕ್ಕಾಗಿ ಸಂಪುಟದ ಹಿರಿಯ ಸಚಿವರ ಜತೆ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯವನ್ನು ತಮಗೆ ತಿಳಿಸುವಂತೆ ಮುಖ್ಯಮಂತ್ರಿ ಅವರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ನಡೆದ ಭೇಟಿಯ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ಈ ಅಭಿಪ್ರಾಯವನ್ನು ಮುಖ್ಯಮಂತ್ರಿ ಅವರಿಗೆ ತಿಳಿಸಿದರು. ಈ ಸೂಚನೆಯ ಮೇರೆಗೆ ರಾಜ್ಯದ ಕೆಲವು ಹಿರಿಯ ಸಚಿವರು ಮತ್ತು ಲೋಕಸಭಾ ಸದಸ್ಯರು ನಾಳೆ ದೆಹಲಿಗೆ ಆಗಮಿಸಲಿದ್ದಾರೆ.

ದಳ (ಯು) ಜೊತೆ ಸ್ಥಳೀಯ ಹೊಂದಾಣಿಕೆಗೆ ದೇವೇಗೌಡ ಕರೆ

ಬೆಂಗಳೂರು, ಏ. 9– ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ದೂಳೀಪಟ ಮಾಡಲು ಸ್ಥಳೀಯವಾಗಿ ಜನತಾದಳ (ಯು) ಜೊತೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಜನತಾದಳ (ಎಸ್) ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಇಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಿದರು.

ಬೆಳಗ್ಗೆ ನಡೆದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಚುನಾವಣಾ ವೀಕ್ಷಕರ ಸಭೆಯಲ್ಲಿ ಅವರು, ಮುಂಬರುವ ರಾಜ್ಯದ 148 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.