ನವದೆಹಲಿ, ಜೂನ್ 24 (ಪಿಟಿಐ, ಯುಎನ್‌ಐ)– ರಾಜಧಾನಿಯಲ್ಲಿ ಇಂದು ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ‘ರಾಷ್ಟ್ರೀಯ ಲೋಕ ತಾಂತ್ರಿಕ ಮೋರ್ಚಾ’ ಎಂಬ ಹೊಸ ರಂಗವನ್ನು ರಚಿಸಿಕೊಂಡಿರುವ ರಾಷ್ಟ್ರೀಯ ಜನತಾದಳ ಹಾಗೂ ಸಮಾಜವಾದಿ ಪಕ್ಷಗಳು ಕೇಂದ್ರದಲ್ಲಿ ಪರ್ಯಾಯ ಸರ್ಕಾರ ಸ್ಥಾಪನೆಗೆ ಕಾಂಗ್ರಸ್‌ಗೆ ಬೆಂಬಲ ನೀಡಲು ಮುಂದೆ ಬಂದಿದೆ.
ರಾಷ್ಟ್ರೀಯ ಲೋಕತಾಂತ್ರಿಕ ಮೋರ್ಚಾಕ್ಕೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಸಂಚಾಲಕರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.