ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ 23-09-1997

Last Updated 22 ಸೆಪ್ಟೆಂಬರ್ 2022, 15:34 IST
ಅಕ್ಷರ ಗಾತ್ರ

ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಸಮಿತಿ

ಹುಬ್ಬಳ್ಳಿ, ಸೆ. 22– ಪ್ರಾದೇಶಿಕ ಅಸಮಾನತೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಂಚರಿಸಿ ಅಧ್ಯಯನ ಮಾಡಲು ಮತ್ತು ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮತ್ತು ನ್ಯೂಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಸಮಿತಿನತೆಗಳ ಕುರಿತು ನಿರಂತರ ನಿಗಾ ವಹಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಕಾಯಂ ಸಮಿತಿ ಯೊಂದನ್ನು ರಚಿಸಲು ಇಂದು ಇಲ್ಲಿ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

‘ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಕುರಿತು ಅಧ್ಯಯನ ಮಾಡುವಂತೆ ಈ ಸಮಿತಿಗೆ ಸೂಚಿಸಲಾಗಿದ್ದು, ಸಮಿತಿಯು 3 ತಿಂಗಳ ಒಳಗೆ ತನ್ನ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಹೇಳಿದರು.

ನ್ಯೂಯಾರ್ಕ್: ಪಂಜಾಬ್ ಪ್ರತ್ಯೇಕತೆ ಅಪಪ್ರಚಾರ– ಗುಜ್ರಾಲ್ ಖಂಡನೆ

ನ್ಯೂಯಾರ್ಕ್, ಸೆ. 22 (ಪಿಟಿಐ)– ಪಂಜಾಬ್ ಅನ್ನು ಭಾರತದಿಂದ ಬೇರ್ಪಡಿಸಬೇಕೆಂದು ಪ್ರತ್ಯೇಕತಾವಾದಿಗಳು ಅಪಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಧಾನಿ ಐ.ಕೆ. ಗುಜ್ರಾಲ್ ಉಗ್ರವಾಗಿ ಖಂಡಿಸಿದ್ದಾರೆ.

ಅಂತರರಾಷ್ಟ್ರೀಯ ಪಂಜಾಬಿ ಸಂಸ್ಥೆ ಆಶ್ರಯದಲ್ಲಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT