ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ| ಭಾನುವಾರ, 30-11-1997

Last Updated 29 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಬಿರುಸಿನ ರಾಜಕೀಯ ಚಟುವಟಿಕೆ ಮುಂದುವರಿದ ಅನಿಶ್ಚಯ ಸ್ಥಿತಿ

ನವದೆಹಲಿ, ನ. 29– ಪ್ರಧಾನಿ ಐ.ಕೆ. ಗುಜ್ರಾಲ್ ನೇತೃತ್ವದ ಸಂಯುಕ್ತ ರಂಗ ಸರ್ಕಾರದ ರಾಜೀನಾಮೆಯಿಂದಾಗಿ ರಾಜಧಾನಿಯಲ್ಲಿ ರಾಜಕೀಯ ಚಟುವಟಿಕೆ ತೀವ್ರಗೊಂಡಿದ್ದು, ಕಾಂಗ್ರೆಸ್ ಹಾಗೂ ಭಾರತೀಯ ಜನತಾಪಕ್ಷಗಳು ಸರ್ಕಾರ ರಚನೆಗೆ ಅಗತ್ಯವಿರುವಷ್ಟು ಸದಸ್ಯರ ಬೆಂಬಲ ಪಡೆಯುವ ಬಗ್ಗೆ ತಮ್ಮ ಮಿತ್ರಪಕ್ಷಗಳ ಜತೆ ಸಮಾಲೋಚಿಸುತ್ತಿವೆ.

ಸರ್ಕಾರ ರಚಿಸುವ ನಿಟ್ಟಿನಲ್ಲಿ ಯಾವುದೇ ಪಕ್ಷ ಅಗತ್ಯವಿರುವಷ್ಟು ಸದಸ್ಯರ ಬೆಂಬಲ ಗಳಿಸುವ ಸೂಚನೆಗಳು ಕಂಡುಬರದಿರುವ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ರಾಜಕೀಯ ಅನಿಶ್ಚಯತೆ ಮುಂದುವರಿದಿದೆ.

ಕೇಂದ್ರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಆರಂಭ

ನವದೆಹಲಿ, ನ. 29– ಕೇಂದ್ರದಲ್ಲಿ ಪರ್ಯಾಯ ಸರ್ಕಾರ ರಚಿಸುವ ಸಲುವಾಗಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಪ್ರಕ್ರಿಯೆ ಪ್ರಾರಂಭಿಸಿದ್ದು, ಮೊದಲ ಹಂತವಾಗಿ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಚರ್ಚೆಗೆ ಆಹ್ವಾನಿಸಿದ್ದಾರೆ.

ಸಂಯುಕ್ತ ರಂಗ ಸರ್ಕಾರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಕಾನೂನು ತಜ್ಞರ ಸಲಹೆಯನ್ನೂ ರಾಷ್ಟ್ರಪತಿ ಅವರು ಪಡೆದಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT