ಪ್ರಜಾವಾಣಿ 25 ವರ್ಷಗಳ ಹಿಂದೆ: ಶುಕ್ರವಾರ 20.6.1997

ಸಮವಸ್ತ್ರಗಳಿಗೆ ಇನ್ನೂ ರಜೆ!
ಬೆಂಗಳೂರು, ಜೂನ್ 19– ಕಳೆದವರ್ಷದಂತೆ ಈ ಬಾರಿಯೂ ರಾಜ್ಯದಲ್ಲಿಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆಯಲ್ಲಿ ವಿಳಂಬವಾಗಲಿದೆ. ಇದರಿಂದಾಗಿ ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೊದಲ ಅರ್ಧ ಭಾಗದಲ್ಲಿ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 28 ಲಕ್ಷ ವಿದ್ಯಾರ್ಥಿಗಳು ಸಮವಸ್ತ್ರ ಧರಿಸದೆಯೇ ಶಾಲೆಗೆ ಹೋಗಬೇಕಾಗಿದೆ.
ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಮೂರು ವಾರವಾಗಿದೆ. ರಾಜ್ಯದ ಬಹುತೇಕ ಕಡೆ ಶಾಲೆ ಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, ಸರ್ಕಾರ ಜಾರಿಗೆ ತಂದಿರುವ, ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಮಾತ್ರ ಇನ್ನೂ ಚಾಲನೆ ದೊರೆತಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.