ಗುರುವಾರ , ಸೆಪ್ಟೆಂಬರ್ 29, 2022
28 °C

25 ವರ್ಷಗಳ ಹಿಂದೆ| ಮಂಗಳವಾರ, 9–9–1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಣ್ವಸ್ತ್ರ ತಯಾರಿಕೆಗೆ ಸಿದ್ಧ: ಗುಜ್ರಾಲ್‌

ನವದೆಹಲಿ, ಸೆ.8 (ಯುಎನ್‌ಐ)– ‘ಭಾರತ ಅಣ್ವಸ್ತ್ರಗಳನ್ನು ತಯಾರಿಸಬಹುದು ಹಾಗೂ ಯಾವುದೇ ಸನ್ನಿವೇಶವನ್ನು ಎದುರಿಸಲು ಅಣ್ವಸ್ತ್ರ ಬಳಕೆಯ ಸಾಧ್ಯತೆಯನ್ನು ಕಾಯ್ದಿರಿಸಿಕೊಳ್ಳುವುದು’ ಎಂದು ಪ್ರಧಾನಿ ಐ.ಕೆ. ಗುಜ್ರಾಲ್‌ ಇಂದು ಇಲ್ಲಿ ಘೋಷಿಸಿದರು.

ಇಂದಿನಿಂದ ಆರಂಭವಾಗಿರುವ ‘ನಿರಂತರ ಅಭಿವೃದ್ಧಿಗೆ ಪರಮಾಣು ಶಕ್ತಿ’ ಎಂಬ ಎರಡು ದಿನಗಳ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ, ಭಾರತವು ಶಾಂತಿ ಒಪ್ಪಂದಕ್ಕೆ ಬದ್ಧವಾಗಿದ್ದರೂ ಅಣ್ವಸ್ತ್ರ ತಂತ್ರಜ್ಞಾನ ಅಭಿವೃದ್ಧಿಯಿಂದ ಭಾರತವನ್ನು ತಡೆಯಲು ಪ್ರಯತ್ನಿಸುತ್ತಿರುವ ವಿದೇಶಿ ಶಕ್ತಿಗಳನ್ನು ತೀವ್ರವಾಗಿ ಟೀಕಿಸಿದರು.

ಬೆಳಗಾವಿ ಜಿಲ್ಲೆ ವಿಭಜನೆ ಇಲ್ಲ: ಪಟೇಲ್‌

ಬೆಂಗಳೂರು, ಸೆ.8– ‘ಮಹಾಜನ್‌ ವರದಿ ಇತ್ಯರ್ಥ ಆಗುವವರೆಗೆ ಬೆಳಗಾವಿ ವಿಭಜನೆ ಮಾಡುವ ಸುದ್ದಿಯನ್ನು ಎತ್ತುವುದಿಲ್ಲ. ಬೆಳಗಾವಿ ವಿಭಜನೆ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರು ಇಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.

ಜಿಲ್ಲೆಗಳನ್ನು ಮರು ವಿಂಗಡಣೆ ಮಾಡಬೇಕು ಎಂಬುದು ಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಉದ್ದೇಶದಿಂದ ಕೈಗೊಂಡ ತೀರ್ಮಾನ. ಆದರೆ, ಕನ್ನಡ ಶಕ್ತಿ ಕೇಂದ್ರದ ಡಾ. ಎಂ. ಚಿದಾನಂದಮೂರ್ತಿ, ಕನ್ನಡ ಚಳವಳಿ ನಾಯಕ ವಾಟಾಳ್‌ ನಾಗರಾಜ್‌ ಮತ್ತು ಇತರೆ ಕನ್ನಡಪರ ಸಂಘಟನೆಗಳು ಬೆಳಗಾವಿ ವಿಭಜನೆ ಬಗ್ಗೆ ಅವಸರದ ಕ್ರಮ ತೆಗೆದುಕೊಳ್ಳಬೇಡಿ ಎಂದು ಸೂಚಿಸಿದರು ಎಂದು ಹೇಳಿದರು.

ಇದಕ್ಕೆ ಮುನ್ನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬೆಳಗಾವಿ ಜಿಲ್ಲೆ ವಿಭಜನೆ ಮಾಡುವ ವಿಚಾರದಲ್ಲಿ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು