ಶುಕ್ರವಾರ, ಮೇ 20, 2022
23 °C
25 years back ಶುಕ್ರವಾರ 09-02-1996

ಪ್ರಜಾವಾಣಿ 25 ವರ್ಷಗಳ ಹಿಂದೆ| ಶುಕ್ರವಾರ, 9.2.1996

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯಸಭೆ: ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನ

ಬೆಂಗಳೂರು, ಫೆ. 8– ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದ್ದು, ಮೂರು ಮತ್ತು ನಾಲ್ಕನೇ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜನತಾದಳ, ಭಾರತೀಯ ಜನತಾ ಪಕ್ಷಗಳು ಅಂತಿಮ ನಿರ್ಧಾರದ ಕಸರತ್ತಿನಲ್ಲಿ ಮುಳುಗಿವೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರಿರುವ ಮುಚ್ಚಿದ ಲಕೋಟೆ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಹೊಣೆ ಹೊತ್ತಿರುವ ಮಾಧವ ಸಿನ್ಹ ಸೋಲಂಕಿ ಅವರು ನಾಳೆ ಬೆಳಿಗ್ಗೆ ನಗರಕ್ಕೆ
ಆಗಮಿಸಲಿದ್ದಾರೆ.

ದಾವೂದ್ ಸಹಚರರಿಗೆ ಆಶ್ರಯ ಕಲ್ಪನಾಥ್ ನಿರಾಕರಣೆ

ನವದೆಹಲಿ, ಫೆ. 8 (ಯುಎನ್ಐ): ಮಾಫಿಯಾ ತಂಡದ ನಾಯಕ ದಾವೂದ್ ಇಬ್ರಾಹಿಂ ಸಹಚರರೊಂದಿಗೆ ಸಂಪರ್ಕವಿದೆ ಎಂಬ ಆರೋಪವನ್ನು ಕೇಂದ್ರದ ಮಾಜಿ ಸಚಿವ ಕಲ್ಪನಾಥ ರಾಯ್ ಇಂದು ಇಲ್ಲಿ ನಿರಾಕರಿಸಿದ್ದಾರೆ. ಈ ಸಂಬಂಧ ಸಿಬಿಐ ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಹವಾಲಾ ಪ್ರಕರಣದಲ್ಲೂ ಹಣ ಪಡೆದಿರುವ ಆಪಾ ದನೆಯನ್ನೂ ಅವರು ಅಲ್ಲಗಳೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು