ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಗುರುವಾರ, ನವೆಂಬರ್‌ 14, 1996

Last Updated 13 ನವೆಂಬರ್ 2021, 19:31 IST
ಅಕ್ಷರ ಗಾತ್ರ

ರಾಜ್ಯ ನೀರಾವರಿ ವ್ಯವಸ್ಥೆ ಆಧುನೀಕರಣ: ಪಟೇಲ್

ಹರಿಹರ, ನ. 13– ನೀರಾವರಿ ಪ್ರದೇಶಗಳಲ್ಲಿ ರೈತರಿಗೆ ಸಮರ್ಪಕವಾಗಿ ನೀರು ಪೂರೈಸುವ ವ್ಯವಸ್ಥೆಯನ್ನು ಸುಮಾರು 144 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಇಲ್ಲಿ ತಿಳಿಸಿದರು.

ಮಹಾರಾಷ್ಟ್ರದಲ್ಲಿ ನೀರು ನಿರ್ವಹಣಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ಸೂಚಿಸಿದ ಅವರು, ಅದೇ ಮಾದರಿಯಲ್ಲಿಕರ್ನಾಟಕದಲ್ಲೂ ಕೂಡಾ ಜಿಲ್ಲಾಮಟ್ಟದ ಸಮಿತಿಗಳನ್ನು ರಚಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರೈತರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಆಯಾ ಕ್ಷೇತ್ರದ ರೈತರನ್ನೊಳಗೊಂಡ ಜಿಲ್ಲಾವಾರು ಕಾರ್ಯಕಾರಿಣಿ ಸಮಿತಿಯನ್ನು ರಚಿಸಲು ಸರ್ಕಾರ ಯೋಚಿಸಿದೆ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT