ಸೋನಿಯಾ ಆಗಮನ: ಜನತೆ ಬಳಿ ತೆರಳಲು ಕರೆ

ಸುಭಾಷ್ನಗರ (ಕಲ್ಕತ್ತ) ಆಗಸ್ಟ್ 9– ಇದೇ ಮೊದಲ ಬಾರಿಗೆ ಎಐಸಿಸಿ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಅವರು ಪಾಲ್ಗೊಂಡು, ಜನಸಂಪರ್ಕ ಹೆಚ್ಚಿಸಿಕೊಂಡು ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಅಧಿವೇಶನಕ್ಕೆ ಸೋನಿಯಾ ಹಾಜರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಅವರು, ಪಕ್ಷವನ್ನು ಮುನ್ನಡೆಸುವಂತೆ ಸೋನಿಯಾ ಅವರಲ್ಲಿ ಮನವಿ ಮಾಡಿಕೊಂಡರು.

ಇಲ್ಲಿ ನಡೆಯುತ್ತಿರುವ 80ನೇ ಎಐಸಿಸಿ ಅಧಿವೇಶನದಲ್ಲಿ ಸೋನಿಯಾ ಅವರೇ ಪ್ರಮುಖ ಆಕರ್ಷಣೆಯಾಗಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಕೇಸರಿ ಅವರು, ‘ಪಕ್ಷವನ್ನು ಬಲಪಡಿಸಲು ನೀವು ಬಯಸುವ ಯಾವುದೇ ಜವಾಬ್ದಾರಿ ತೆಗೆದುಕೊಳ್ಳಬಹುದು’ ಎಂದರು.

ಬಂಡಾಯ ನಾಯಕಿಯಿಂದ ಹೊಸ ಪಕ್ಷ

ಕಲ್ಕತ್ತ, ಆಗಸ್ಟ್ 9– ಪಶ್ಚಿಮ ಬಂಗಾಳ ಕಾಂಗ್ರೆಸ್ನ ಬಂಡಾಯ ನಾಯಕಿ ಮಮತಾ ಬ್ಯಾನರ್ಜಿ ಅವರು ‘ತೃಣಮೂಲ ಕಾಂಗ್ರೆಸ್’ ಎಂಬ ಹೊಸ ಪಕ್ಷ ಸ್ಥಾಪನೆಯನ್ನು ಪ್ರಕಟಿಸುವುದರೊಂದಿಗೆ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.

ಕಾಂಗ್ರೆಸ್ ಅಧಿವೇಶನ ನಡೆಯುತ್ತಿರುವ ಸಭಾಂಗಣದ ಪಕ್ಕದಲ್ಲೇ ಸಂಘಟಿಸಿದ್ದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಹೊಸ ಪಕ್ಷದ ರಚನೆ ನಿರ್ಧಾರವನ್ನು ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.