ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಶನಿವಾರ, 18.1.1997

Last Updated 17 ಜನವರಿ 2022, 15:04 IST
ಅಕ್ಷರ ಗಾತ್ರ

ರಾಷ್ಟ್ರೀಯ ಜಲನೀತಿ ರೂಪಿಸಲು ಪ್ರಧಾನಿಗೆ ಒತ್ತಾಯ

ಬೆಂಗಳೂರು, ಜ. 17– ಪ್ರಮುಖ ವಿರೋಧ ಪಕ್ಷಗಳ ಸಭಾತ್ಯಾಗದ ಮಧ್ಯೆ ಇಂದು ಇಲ್ಲಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ವಿವಾದ ಕುರಿತ ಸರ್ವಪಕ್ಷ ಸಭೆ ಜಲ ವಿವಾದಗಳ ಇತ್ಯರ್ಥಕ್ಕೆ ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದಕ್ಕಾಗಿ ಅಂತರ್‌ರಾಜ್ಯ ಮಂಡಳಿ ಸಭೆ ಕರೆಯುವಂತೆ ಪ್ರಧಾನಿಯನ್ನು ಒತ್ತಾಯಿಸಲು ನಿರ್ಧರಿಸಿತು.

ಇಂಥ ಒಂದು ಮಾರ್ಗದರ್ಶಿ ಸೂತ್ರ ಅಸ್ತಿತ್ವಕ್ಕೆ ಬರುವವರೆಗೆ ಕಾವೇರಿ ನ್ಯಾಯಮಂಡಳಿ ಕಲಾಪ ಸ್ಥಗಿತಗೊಳಿಸಿ ಆದೇಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಕ್ಕೂ ತೀರ್ಮಾನಿಸಿತು.

ಎರಡು ತಾಸಿನ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿವರ ನೀಡಿದ ಜೆ.ಎಚ್‌.ಪಟೇಲ್‌ ಅವರು ‘ನ್ಯಾಯಮಂಡಳಿ ಕಲಾಪವನ್ನು ಮಾತ್ರ ರಾಜ್ಯ ಸರ್ಕಾರ ಬಹಿಷ್ಕರಿಸುವುದಿಲ್ಲ; ಬದಲಿಗೆ ಮಂಡಳಿಯ ಮುಂದೆ ಹಾಜರಾಗಿ ತನ್ನ ನಿಲುವನ್ನು ವಿವರಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.

ಮಂಡ್ಯ: ರೈಲ್ವೆ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ತಡೆ

ಬೆಂಗಳೂರು, ಜ. 17– ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಬೇಕಿದ್ದ ಬೆಂಗಳೂರು– ಸತ್ಯಮಂಗಲ ರೈಲ್ವೆ ಮಾರ್ಗದ ಸಮೀಕ್ಷೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ತಡೆಯೊಡ್ಡಿದೆ.

ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಹಾಗೂ ಸಂಸತ್‌ ಸದಸ್ಯರಾದ ಎಚ್‌.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಬೇಕಿದ್ದ ಈ ಬಹು ಕಾಳದ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಫೆಬ್ರುವರಿ 6 ರಂದು ನಡೆಯಲಿರುವ ವಿಧಾಣಸಭೆಯ ಉಪ ಚುನಾವಣೆಯ ಹಿನ್ನೆಲೆಯಲ್ಲಿ ತಡೆಹಿಡಿಯಲಾಯಿತು ಎಂದು ರಾಜ್ಯ ಚುನಾವಣಾಧಿಕಾರಿ ಎನ್‌.ಕ್ಷೇತ್ರಪಾಲ್‌ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT