ಮಂಗಳವಾರ, ಸೆಪ್ಟೆಂಬರ್ 27, 2022
27 °C

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಭಾನುವಾರ, 20–07–1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕೃಷ್ಣಾ ನೀರು ಬಳಕೆ ಅವಧಿ ವಿಸ್ತರಣೆಗೆ ಮನವಿ ಇಲ್ಲ’

ಬೆಳಗಾವಿ, ಜುಲೈ 19– ಕೃಷ್ಣಾ ನದಿ ನೀರಿನ ಬಳಕೆಗೆ ಬಚಾವತ್‌ ಆಯೋಗ ವಿಧಿಸಿರುವ 2,000ನೇ ಇಸವಿ ಮಿತಿಯನ್ನು ವಿಸ್ತರಿಸುವಂತೆ ಕರ್ನಾಟಕ ಸರ್ಕಾರ ಕೇಳುವುದಿಲ್ಲ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವ ಕೆ.ಎನ್‌. ನಾಗೇಗೌಡ ಇಂದು ಹಿಡಕಲ್‌ನಲ್ಲಿ ಸ್ಪಷ್ಟಪಡಿಸಿದರು.

ಘಟಪ್ರಭಾ ಜಲಾಶಯದ ತಟದಲ್ಲಿನ ಹುನ್ನೂರು ಪ್ರವಾಸಿ ಮಂದಿರದಲ್ಲಿ ವರದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ‘ಬದಲಿಗೆ ಕರ್ನಾಟಕ ಪಾಲಿನ 734 ಟಿ.ಎಂ.ಸಿಗಿಂತ ಹೆಚ್ಚುವರಿ ನೀರನ್ನು ಹಂಚಿಕೊಳ್ಳುವ ಕುರಿತು ಆಂಧ್ರದ ಮುಖ್ಯಮಂತ್ರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆಗೆ ಮಾತುಕತೆಗೆ ಮುಂದಾಗಬೇಕು’ ಎಂದು ಕರೆ ನೀಡಿದರು.

ಕೃಷ್ಣಾ ನದಿ ಮತ್ತು ಅದರ ಉಪನದಿಗಳು ಸೇರಿ ಈ ಶತಮಾನದ ಅಂತ್ಯದವರೆಗೆ 734 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಬೇಕು ಎಂದು ಬಚಾವತ್‌ ಆಯೋಗ ತೀರ್ಪು ನೀಡಿದೆ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು