ಶನಿವಾರ, ಜನವರಿ 29, 2022
23 °C

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಮಂಗಳವಾರ, 7–1–1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ಮಧ್ಯಸ್ಥಿಕೆಗೆ ಪಟೇಲ್‌ ಮನವಿ

ಬೆಂಗಳೂರು, ಜ. 6– ಕಾವೇರಿ ನೀರು ಹಂಚಿಕೆ ಸಂಬಂಧದಲ್ಲಿ ಉಭಯ ರಾಜ್ಯಗಳ ನಡುವಿನ ಮಾತುಕತೆ ವಿಫಲವಾಗಲು ಕಾರಣವಾಗಿರುವ ತಮಿಳುನಾಡು ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯದ ವಿರೋಧ ಪಕ್ಷಗಳ ನಾಯಕರು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದರೆ, ವಿವಾದ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಮನವಿ ಮಾಡಿದ್ದಾರೆ.

ಸೌಹಾರ್ದ ಚರ್ಚೆಯ ಮೂಲಕವೇ ವಿವಾದ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ನಡೆಯುತ್ತಿದ್ದ ಮಾತುಕತೆ ವಿಫಲವಾಗಲು ಕಾರಣವಾಗಿರುವ ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿಯವರ ನಿಲುವಿನಿಂದ ಉಭಯ ರಾಜ್ಯಗಳ ಬಾಂಧವ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ವಿರೋಧಿ ನಾಯಕರು ಟೀಕಿಸಿದ್ದಾರೆ.

ವಿದ್ಯುತ್‌ ಸರಬರಾರು ಖಾಸಗಿಗೆ: ಪ್ರಸ್ತಾವನೆ

ಕೊಯಮತ್ತೂರು, ಜ. 6 (ಪಿಟಿಐ)– ರಾಷ್ಟ್ರದಲ್ಲಿ ವಿದ್ಯುತ್‌ ಸರಬರಾಜು ಮಾಡುವ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ವಿದ್ಯುತ್‌ ಸಚಿವಾಲಯದ ಪ್ರಸ್ತಾವನೆಯನ್ನು ಅಂಗೀಕಾರಕ್ಕಾಗಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ವಿದ್ಯುತ್‌ ಮತ್ತು ಅಸಾಂಪ್ರದಾಯಿಕ ಇಂಧನ ಮೂಲಗಳ ರಾಜ್ಯ ಸಚಿವ ಡಾ. ಎಸ್‌.ವೇಣುಗೋಪಾಲಚಾರಿ ಇಂದು ಇಲ್ಲಿ ತಿಳಿಸಿದರು.

ಹಾಲಿ ಇರುವ ವಿದ್ಯುತ್‌ ಕಾಯಿದೆ ಅನ್ವಯ ಖಾಸಗಿಯವರು ವಿದ್ಯುತ್‌ ಸರಬರಾಜು ಮಾಡಲು ಅವಕಾಶವಿಲ್ಲ. ತಮ್ಮ ಸಚಿವಾಲಯವು ಕಾಯಿದೆಗೆ ತಿದ್ದುಪಡಿ ಕೋರಿದ್ದು, ಇದಕ್ಕೆ ಕೇಂದ್ರ ಕಾನೂನು ಸಚಿವಾಲಯವು ಅನುಮತಿ ನೀಡಿದೆ ಎಂದು ಪತ್ರಕರ್ತರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು