ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಶುಕ್ರವಾರ 10.1.1997

Last Updated 9 ಜನವರಿ 2022, 19:30 IST
ಅಕ್ಷರ ಗಾತ್ರ

ಅಂಗನವಾಡಿ ಅಕ್ರಮ: ಬಯಲು

ಬೆಂಗಳೂರು, ಜ. 9– ‘ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರದ ಖರೀದಿ ಮತ್ತು ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆದು, ಸರ್ಕಾರಕ್ಕೆ ಕನಿಷ್ಠ ₹25 ಕೋಟಿ ನಷ್ಟವಾಗಿರುವ ಪ್ರಕರಣವನ್ನು ವಿಧಾನಮಂಡಲದ ವಿಷಯ ಸಮಿತಿ ಬಯಲು ಮಾಡಿದೆ’.

ರಾಜ್ಯದಲ್ಲಿನ 39,985 ಅಂಗನವಾಡಿ ಕೇಂದ್ರಗಳಲ್ಲಿ 32,31,730 ಫಲಾನುಭವಿಗಳಿಗೆ ನೀಡುತ್ತಿರುವ ಪೌಷ್ಟಿಕ ಆಹಾರ ಖರೀದಿ, ವಿತರಣೆಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ಸಿಓಡಿ ತನಿಖೆ ನಡೆಸುವಂತೆ ಕಾರ್ಮಿಕ, ಸಮಾಜ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ವಿಷಯ ಸಮಿತಿ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT