ಶನಿವಾರ, ಮೇ 21, 2022
23 °C

ಪ್ರಜಾವಾಣಿಯಲ್ಲಿ 25 ವರ್ಷಗಳ ಹಿಂದೆ: ಭಾನುವಾರ 19.1.1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಏರಿಕೆ

ಬೆಂಗಳೂರು, ಜ.18– ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಸ್‌ ಪ್ರಯಾಣ ದರ ಏರಿಸಲು ಸರ್ಕಾರ ನಿರ್ಧರಿಸಿದೆ. ಏರಿಕೆಯಾಗುವ ನಿಖರವಾದ ದರ ಪ್ರಮಾಣವನ್ನು ಹದಿನೈದು ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಇಂದು ಇಲ್ಲಿ ತಿಳಿಸಿದರು.

ನೀರಾವರಿ ಶುಲ್ಕ ವಿಧಿಸುವ ಇಂಗಿತವನ್ನೂ ಅವರು ವ್ಯಕ್ತಪಡಿಸಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಪರಿಶೀಲಿಸಲು ರಚಿಸಿದ್ದ ಸಂಪುಟ ಉಪ ಸಮಿತಿಯ ಶಿಫಾರಸಿನ ಮೇಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ಸಂಪುಟ ಉಪ ಸಮಿತಿ ನೀಡಿರುವ ವರದಿಯನ್ನು ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ಸಂಸ್ಥೆಯನ್ನು ಉಳಿಸಲು ದರ ಏರಿಸದೆ ಬೇರೆ
ಮಾರ್ಗವೇ ಇಲ್ಲ ಎಂದು ಅವರು ನುಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು