ಮಧ್ಯಂತರ ಚುನಾವಣೆ ಇಲ್ಲ: ದೇವೇಗೌಡ

ಬೆಂಗಳೂರು, ಜ. 19– ಲೋಕಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಅವರ ಹೇಳಿಕೆಯನ್ನು ತಳ್ಳಿ ಹಾಕಿದ ಪ್ರಧಾನಿ ಎಚ್.ಡಿ.ದೇವೇಗೌಡರು, ‘ಇದು ಕೇವಲ ಅಡ್ವಾಣಿ ಅವರ ಕಲ್ಪನೆ’ ಎಂದು ಲೇವಡಿ ಮಾಡಿದರು.

ಚೆನ್ನೈನಿಂದ ಇಂದು ನಗರಕ್ಕೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು ಭೇಟಿ ಮಾಡಿ ಎಲ್.ಕೆ.ಅಡ್ವಾಣಿ ಅವರ ‘1997 ಚುನಾವಣೆಗಳ ವರ್ಷವಾಗಲಿದೆ. ದೇಶ ಲೋಕಸಭೆಗೆ ಮಧ್ಯಂತರ ಚುನಾವಣೆಯನ್ನು ಎದುರಿಸಲಿದೆ’ ಎಂಬ ಹೇಳಿಕೆಯತ್ತ ಗಮನ ಸೆಳೆದಾಗ ‘ಸಂಯುಕ್ತರಂಗ ಸರ್ಕಾರ ಸುಭದ್ರವಾಗಿರುವುದರಿಂದ ಲೋಕಸಭೆಗೆ ಮಧ್ಯಂತರ ಚುನಾವಣೆ ನಡೆಯುವ ಯಾವುದೇ ಸಾಧ್ಯತೆ ಇಲ್ಲ’ ಎಂದು ಸಮರ್ಥಿಸಿಕೊಂಡರು.

‘ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಸೀತಾರಾಂ ಕೇಸರಿ ಅವರು ಸಂಯುಕ್ತರಂಗ ಸರ್ಕಾರಕ್ಕೆ ನೀಡಿರುವ ಬೇಷರತ್ ಬೆಂಬಲದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಈಗಾಗಲೇ ಪುನರುಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಳ್ಳುವವರೆಗೆ ಅಥವಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬೇಷರತ್ ಬೆಂಬಲದ ತನ್ನ ನಿರ್ಧಾರವನ್ನು ಬದಲು ಮಾಡುವವರೆಗೆ ಸಂಯುಕ್ತರಂಗ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.