ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಮಂಗಳವಾರ, 20.5.1997

Last Updated 19 ಮೇ 2022, 19:45 IST
ಅಕ್ಷರ ಗಾತ್ರ

ಒಂದು ಲಕ್ಷ ಹೆಕ್ಟೇರ್‌ಗೆ ನೀರಾವರಿ ಸೌಲಭ್ಯ

ಬೆಂಗಳೂರು, ಮೇ 19– ರಾಜ್ಯ ಸರ್ಕಾರ ಈ ಸಾಲಿನಲ್ಲಿ ಒಟ್ಟಾರೆ 1,050 ಕೋಟಿ ರೂಪಾಯಿಗಳ ವೆಚ್ಚದಲ್ಲಿ 1,00,000 ಹೆಕ್ಟೇರು ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸಲಿದೆ.

ಸುಮಾರು 400 ಕೋಟಿ ರೂಪಾಯಿ ಗಳನ್ನು ವೆಚ್ಚ ಮಾಡಿ ಹದಿಮೂರು ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗೆ ಪೂರ್ಣಗೊಳಿಸಿ 47,043 ಹೆಕ್ಟೇರ್ ಪ್ರದೇಶಕ್ಕೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ 650 ಕೋಟಿ ರೂಪಾಯಿಗಳನ್ನು ಒದಗಿಸಿ 50,000 ಹೆಕ್ಟೇರು ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸುವುದಾಗಿ ಭಾರಿ ನೀರಾವರಿ ಖಾತೆ ಸಚಿವ ಕೆ.ಎನ್. ನಾಗೇಗೌಡ ಅವರು ಇಂದು ಇಲ್ಲಿ ತಿಳಿಸಿದರು.

ಮಹಿಳಾ ಮಸೂದೆ ಜಾರಿಗೆ ಜನತಾದಳ ಬದ್ಧ: ಪಾಸ್ವಾನ್

ನವದೆಹಲಿ, ಮೇ 19 (ಪಿಟಿಐ)– ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆ ಯರಿಗೆ ಮೀಸಲಾತಿ ನೀಡುವ ಮಸೂದೆಗೆ ಜನತಾದಳ ಬದ್ಧವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ರಾಂ ವಿಲಾಸ್ ಪಾಸ್ವಾನ್ ಅವರು ಇಂದು ಇಲ್ಲಿ ಹೇಳಿದರು.

‘ಸ್ವಾರ್ಥಕ್ಕಾಗಿ ಈ ಮಸೂದೆಯನ್ನು ವಿರೋಧಿಸುವವರು ಸಾಮಾಜಿಕ ನ್ಯಾಯದ ಬಣ್ಣ ಬಳಿಯುತ್ತಿದ್ದಾರೆ’ ಎಂದ ಅವರು, ಪಕ್ಷ ಈಗಾಗಲೇ ಮಸೂದೆಯನ್ನು ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದೆ. ಕೆಲ ಸದಸ್ಯರು ವೈಯಕ್ತಿಕವಾಗಿ ಇದನ್ನು ವಿರೋಧಿಸಿದ ಮಾತ್ರಕ್ಕೆ ಅದು ಪಕ್ಷದ ನಿರ್ಧಾರವಾಗಲಾರದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT