ಶನಿವಾರ, ಮೇ 28, 2022
26 °C

ಪ್ರಜಾವಾಣಿ 25 ವರ್ಷಗಳ ಹಿಂದೆ: ಶುಕ್ರವಾರ, 4–4–1997

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಂಗ– ಕಾಂಗ್ರೆಸ್‌ ನಾಯಕರ
ಮಾತುಕತೆ ಇಂದು ಸಂಭವ

ನವದೆಹಲಿ, ಏ. 3– ಸಂಯುಕ್ತ ರಂಗ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಂಡಿರುವ ನಿರ್ಧಾರವನ್ನು ಪುನರ್‌ ಪರಿಶೀಲಿಸಬೇಕೆಂದು
ಕಾಂಗ್ರೆಸ್ಸಿಗೆ ರಂಗ ಚಾಲನಾ ಸಮಿತಿಯು ಮಾಡಿರುವ ಮನವಿಯ ನಿರ್ಣಯವನ್ನು ಪಕ್ಷಕ್ಕೆ ಇಂದು ಅಧಿಕೃತವಾಗಿ ತಲುಪಿಸಲಾಗಿದ್ದು ನಾಳೆಯಿಂದ ಉಭಯ ಪಕ್ಷಗಳ ನಡುವಣ ಅಧಿಕೃತ ಮಾತುಕತೆಗಳಿಗೆ ದಿಕ್ಸೂಚಿಯಾಗುವ ಸಂಭವ ಇದೆ.

ಈ ಮಧ್ಯೆ ಕಾಂಗ್ರೆಸ್‌ ಸರ್ಕಾರ ರಚಿಸುವ ಪರಿಸ್ಥಿತಿ ಬಂದರೆ ಪಕ್ಷದ ಅಧ್ಯಕ್ಷ ಸೀತಾರಾಂ ಕೇಸರಿ ಅವರು ಪ್ರಧಾನಿ ಸ್ಥಾನಕ್ಕೆ ಅಭ್ಯರ್ಥಿಯಲ್ಲ ಎಂಬುದಾಗಿ ಪಕ್ಷದ ನಂಬಲರ್ಹ ಮೂಲಗಳು ಸ್ಪಷ್ಟಪಡಿಸಿವೆ. ಆದರೆ ಸಂಯುಕ್ತ ರಂಗದ ನಾಯಕರೊಡನೆ ಮಾತುಕತೆ ನಡೆದರೂ, ನಾಯಕತ್ವ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್‌ ನಿಲುವಿನಲ್ಲಿ ಬದಲಾವಣೆ ಇಲ್ಲ ಎನ್ನಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು