ಬೆಂಗಳೂರು, ಡಿ. 22– ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಓದುತ್ತಿರುವ 1.10 ಕೋಟಿ ವಿದ್ಯಾರ್ಥಿಗಳನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ವ್ಯಾಪ್ತಿಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಅಂದರೆ ಜೂನ್ ತಿಂಗಳಿಂದಲೇ ಈ ವಿಮೆ ಯೋಜನೆ ಜಾರಿಗೆ ಬರಲಿದ್ದು, ಶಾಲೆಗೆ ಹೊರಟ ವಿದ್ಯಾರ್ಥಿ ಅವಘಡದಲ್ಲಿ ಮೃತಪಟ್ಟರೆ ಆತನ ಕುಟುಂಬಕ್ಕೆ ರೂ. 25,000 ವರೆಗೆ ವಿಮೆ ಹಣ ನೀಡಲಾಗುವುದು. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತಿವರ್ಷಕ್ಕೆ ಒಂದು ರೂಪಾಯಿಯಂತೆ ವಿಮೆ ಕಂತು ತುಂಬಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತಿಳಿಸಿದರು.

ಉತ್ತರ ಕರ್ನಾಟಕ ಪಟ್ಟಣ ಅಭಿವೃದ್ಧಿ ಯೋಜನೆ ಶೀಘ್ರ

ಮಂಗಳೂರು, ಡಿ. 22– ಕರಾವಳಿ ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಮಾದರಿಯಲ್ಲಿಯೇ ಉತ್ತರ ಕರ್ನಾಟಕದ ಹಲವು ಪಟ್ಟಣ ಗಳ ಅಭಿವೃದ್ಧಿಗೆ ವಿಶ್ವಬ್ಯಾಂಕ್ ಜತೆ ಮಾತುಕತೆ ಆರಂಭಿಸಿದ್ದು, ಸದ್ಯದಲ್ಲೇ ಇದು ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.