ಡೇರಿಗೆ ನುಗ್ಗಿ ದಾಂಧಲೆ

ಬೆಂಗಳೂರು, ಫೆ. 6– ಬೆಂಗಳೂರು ಡೇರಿಯ ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಹೊರಸೂಸುವ ದುರ್ವಾಸನೆಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಚಂದ್ರಪ್ಪ ಕೊಳೆಗೇರಿ ನಿವಾಸಿಗಳು ಮಾರಕಾಸ್ತ್ರಗಳೊಂದಿಗೆ ಡೇರಿಯ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ವಾಹನಗಳನ್ನು ಜಖಂಗೊಳಿಸಿ ಕಚೇರಿಯಲ್ಲಿ ದಾಂಧಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.

ಸಂಜೆ ಸುಮಾರು 4.30ರ ವೇಳೆಗೆ ಮಚ್ಚು, ದೊಣ್ಣೆ, ಸೈಕಲ್ ಚೈನ್ ಹಿಡಿದ ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿಯನ್ನು ತಳ್ಳಿ ಒಳನುಗ್ಗಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ

ನವದೆಹಲಿ, ಫೆ. 6– ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಇಂದು ನಿರ್ಧರಿಸಿತು.

ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಿಗರೇಟ್ ಮತ್ತಿತರ ತಂಬಾಕು ಕಂಪನಿಗಳು ಪ್ರಾಯೋಜಿಸುವುದನ್ನು ಕೂಡ ನಿಷೇಧಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.