ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಭೇಟಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅವರ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಕೊಂಡುಹೋಗಿದ್ದ ‘ಮೆಲೊಡಿ’ ಟಾಫಿಯಿಂದಾಗಿ ಈ ಭೇಟಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿತು. ಮೆಲೊನಿಯವರ ಬಗ್ಗೆ ಜಾಲತಾಣ ಬಳಕೆದಾರರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅವರ ಬಾಲ್ಯ, ಬದುಕು, ರಾಜಕೀಯ ಬಗ್ಗೆ ಕುತೂಹಲಕಾರಿ ಅಂಶಗಳು ಬಯಲಿಗೆ ಬಂದವು.