ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲ | ಮೌಲ್ಯಮಾಪನ ಶುಲ್ಕ ಕಡಿತಗೊಳಿಸಿ

Last Updated 2 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು ವಿಶ್ವವಿದ್ಯಾಲಯದ 2, 4 ಮತ್ತು 6ನೇ ಸೆಮಿಸ್ಟರ್ ಫಲಿತಾಂಶಗಳು ಹೊರಬಿದ್ದಿದ್ದು, ಉತ್ತರ ಪತ್ರಿಕೆಗಳ ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ನಿಗದಿತ ಅರ್ಜಿ ಸಲ್ಲಿಸುವ ವೇಳಾಪಟ್ಟಿ ಪ್ರಕಟವಾಗಿದೆ. ಆದರೆ, ಒಂದು ವಿಷಯದ ಛಾಯಾಪ್ರತಿಗಾಗಿ ₹ 405ರಿಂದ ₹ 625 ಹಾಗೂ ಮರು ಮೌಲ್ಯಮಾಪನಕ್ಕಾಗಿ ಬರೋಬ್ಬರಿ ₹ 625ರಿಂದ ₹ 1,265ರವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಇದು ಅತ್ಯಂತ ದುಬಾರಿ ಶುಲ್ಕವಾಗಿರುವುದರಿಂದ ಬಹಳಷ್ಟು ಬಡ ವಿದ್ಯಾರ್ಥಿಗಳು ಈ ಸೇವೆಯನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೌಲ್ಯಮಾಪಕರ ಕಣ್ತಪ್ಪಿನಿಂದಲೇ ಅಂಕಗಳು ಹೆಚ್ಚು- ಕಡಿಮೆಯಾಗುವ ಸಂಭವವೂ ಇರುತ್ತದೆ. ಹೀಗಾಗಿವಿಶ್ವವಿದ್ಯಾಲಯವು ಕೂಡಲೇ ಶುಲ್ಕವನ್ನು ಸಾಧ್ಯವಾದಷ್ಟೂ ಕಡಿತಗೊಳಿಸಿ ವಿದ್ಯಾರ್ಥಿಗಳ ಹಿತ ಕಾಯಬೇಕಿದೆ. ಮರು
ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕಗಳ ವ್ಯತ್ಯಾಸ ಕಂಡುಬಂದಲ್ಲಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವ ನಿಯಮ ರೂಪಿಸಬೇಕು.

-ರೂಪೇಶ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT