ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರಕಗಳ ರಕ್ಷಣೆಗೆ ಬೇಕು ಕ್ರಮ

Last Updated 2 ನವೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರತಿಮೆಯನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸುತ್ತಿರುವುದು ಸಂತೋಷದ ಸಂಗತಿ. ಆದರೆ, ಬೆಂಗಳೂರು ನಗರದಲ್ಲಿ ಕೆಂಪೇಗೌಡರ ಕಾಲದ ಅನೇಕ ಸ್ಮಾರಕಗಳಿವೆ. ಆ ಸ್ಮಾರಕಗಳ ಸುತ್ತಮುತ್ತಲಿನ ಅನೇಕ ಆಸ್ತಿಗಳು ಯಾರದೋ ಪಾಲಾಗಿವೆ. ಕೆಲವರು ಸಂಬಂಧಪಟ್ಟ ಇಲಾಖೆಯ ಸಹಕಾರದಿಂದ ಮಂಜೂರು ಸಹ ಮಾಡಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಪರಿಣಾಮವಾಗಿ ಸ್ಮಾರಕಗಳ ಇರುವಿಕೆಯೇ ಗೊತ್ತಾಗದಂತೆ ಆಗಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಸ್ಮಾರಕಗಳನ್ನು ಉಳಿಸಬೇಕು.

-ಸಿ. ಕಾಳಯ್ಯ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT