ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತ್ತೆ ಮತಪತ್ರ ಬಳಸಬೇಕು ಎಂದು ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಹಾಗಾಗಿ ಅರ್ಜಿದಾರರು ಪ್ರತಿ ಕ್ಷೇತ್ರದಲ್ಲಿಯೂ ಇವಿಎಂ ಎಣಿಕೆ ಜತೆಜತೆಗೆ ವಿವಿಪ್ಯಾಟ್ ಮತಚೀಟಿ ಸಹಾ ಎಣಿಸಬೇಕು ಎಂಬ ನಿಯಮ ಕಡ್ಡಾಯ ಮಾಡಬೇಕು ಎಂಬ ಕೋರಿಕೆಯೊಂದಿಗೆ ಸುಪ್ರೀಂ ಕೋರ್ಟಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು.

ಯಾಕೆಂದರೆ ಇವಿಎಂ ತಿರುಚುವುದು ಸಾಧ್ಯ. ಆದರೆ ವಿವಿಪ್ಯಾಟ್ ತಿರುಚುವುದು ಸಾಧ್ಯವಿಲ್ಲ ಎಂಬುದು ಈ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಹುಬ್ಬಳ್ಳಿ– ಧಾರವಾಡ ಕ್ಷೇತ್ರದಲ್ಲಿ ಸಾಬೀತಾಗಿದೆ. ಈ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಇವುಗಳ ನಡುವೆ ಅಂತರ ಕಂಡುಬಂದಿತ್ತು. ಈ ಪುರಾವೆಯೊಂದಿಗೆ ಅರ್ಜಿದಾರರು ಸುಪ್ರೀಂ ಕೋರ್ಟಿನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು.

ಮಲ್ಲಿಕಾರ್ಜುನ ಶೆಟ್ಟರ್, ಬೆಂಗಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.