ಶುಕ್ರವಾರ, ಜುಲೈ 1, 2022
21 °C

ವಾಚಕರ ವಾಣಿ | ಕಲಾವಿದರ ನೆರವಿಗೇಕೆ ಮೀನಮೇಷ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಹಾಗೂ ಹಲವಾರು ಸಂಘ–ಸಂಸ್ಥೆಗಳಿಗೆ ಅನುದಾನ ನೀಡಲು ಕಳೆದ ಬಾರಿಯ ಬಜೆಟ್‌ನಲ್ಲಿ ಆದೇಶಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಸಮಸ್ಯೆಗಳು ಇರುವುದರಿಂದ ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಲು ಆಗಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ವಿವರಣೆ ನೀಡಿದ್ದರು. ಒಂದು ವರ್ಷದಿಂದಲೂ ಅಧಿಕಾರಿಗಳನ್ನು ಭೇಟಿ ಮಾಡಿದಾಗಲೆಲ್ಲ ಇದೇ ಉತ್ತರ ದೊರೆಯುತ್ತಿದೆ.

ಪ್ರಸಕ್ತ ಸಾಲಿನ ಅನುದಾನ ಬಿಡುಗಡೆಗೆ ಅರ್ಜಿ ಕರೆಯಲಾಗಿದೆ. ತಿಂಗಳಾಂತ್ಯದಲ್ಲಿ ಬಿಡುಗಡೆ ಮಾಡಲು ಇಲಾಖೆಯು ತಯಾರಿ ಮಾಡಿಕೊಳ್ಳುತ್ತಿದೆ. ಆದರೂ ಕಳೆದ ಬಾರಿಯ ಅನುದಾನ ಬಿಡುಗಡೆ ಮಾಡಲು ಏಕೆ ಮೀನ ಮೇಷ ಎಣಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಕೊರೊನಾದ ನಂತರ ಸಂಕಷ್ಟದಲ್ಲಿರುವ ಕಲಾವಿದರ ನೆರವಿಗೆ ಸರ್ಕಾರ ಧಾವಿಸಬೇಕು.

-ನರಸಿಂಹಮೂರ್ತಿ, ತುಮಕೂರು
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು