ಶುಕ್ರವಾರ, ಮಾರ್ಚ್ 5, 2021
30 °C

ಅಲೆಯುವ ಪ್ರಮೇಯ ತಪ್ಪಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳ್ಳಿಗರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹಾರ ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಯೋಜನೆ ಒಂದಷ್ಟು ಭರವಸೆ ಮೂಡಿಸಿದೆ. ಈ ವಿಶಿಷ್ಟ ಚಿಂತನೆಗೆ ಅಭಿನಂದನೆ ಸಲ್ಲಬೇಕು. ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ, ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಪರಿಹಾರ ನೀಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಪಿಂಚಣಿ, ಆಶ್ರಯ ಯೋಜನೆ, ಪಹಣಿ, ಸ್ಮಶಾನ, ಮತದಾರರ ಪಟ್ಟಿ ಪರಿಷ್ಕರಣೆ, ಬಿಪಿಎಲ್ ಕಾರ್ಡ್ ವ್ಯವಸ್ಥೆ, ಪೋಡಿ ಮೊದಲಾದವುಗಳಿಗೆ ಸಂಬಂಧಿಸಿದಂತೆ ಅನೇಕ ಎಡರುತೊಡರುಗಳು ಇರುತ್ತವೆ. ಅವುಗಳಿಗೆ ಸ್ಥಳದಲ್ಲೇ ಪರಿಹಾರ ದೊರೆತರೆ ಫಲಾನುಭವಿಗಳಿಗೆ ಅಷ್ಟರಮಟ್ಟಿಗೆ ನೆಮ್ಮದಿ.

ವಿವಿಧ ಯೋಜನೆಗಳಿಗೆ ಬೇಕಾದ ದಾಖಲೆ ಪಡೆಯಲು ಹಾಗೂ ಇತರ ಸರ್ಕಾರಿ ಕೆಲಸಗಳಿಗಾಗಿ ಮಧ್ಯವರ್ತಿಗಳ ಮೂಲಕ ಹಣ ಕೊಟ್ಟು ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಸರ್ಕಾರವು ಈ ವಾಸ್ತವ ಸ್ಥಿತಿಯನ್ನು ಅರಿತು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಿರುವುದು ಸಮಾಧಾನಕರ. ಇದರಿಂದ ಹಳ್ಳಿಗಾಡಿನ ಜನರು ತಮ್ಮ ಕೆಲಸಗಳಿಗಾಗಿ ಊರಿಂದ ಊರಿಗೆ ಅಲೆಯುವ ಪ್ರಮೇಯ ತಪ್ಪಬಹುದು.

ಅನಿಲ್ ಕುಮಾರ್, ನಂಜನಗೂಡು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.