ಭಾನುವಾರ, ಅಕ್ಟೋಬರ್ 25, 2020
27 °C

ವಾಚಕರ ವಾಣಿ: ಪರೀಕ್ಷೆಗೆ ತಟ್ಟದಿರಲಿ ಬಂದ್‌ ಬಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಕೊರೊನಾ ಕಾರಣದಿಂದ ಪರೀಕ್ಷೆಗಳು ಮುಂದೂಡಲ್ಪಟ್ಟಿದ್ದರಿಂದ ಈಗಾಗಲೇ ಮಹತ್ವದ ಸಮಯ ವ್ಯರ್ಥವಾಗಿದೆ. ಈ ನಡುವೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಹಾಗೂ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಇದೇ 28ರಂದು ರಾಜ್ಯ ಬಂದ್‌ಗೆ ಕರೆ ನೀಡಿದೆ. ಈ ಕಾರಣದಿಂದ ಪರೀಕ್ಷೆಗಳು ಮತ್ತೆ ಮುಂದಕ್ಕೆ ಹೋದರೆ, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ ಮತ್ತು ಉದ್ಯೋಗಕ್ಕೆ ತೊಡಕಾಗುತ್ತದೆ. ಬಂದ್ ನಡೆಸುವವರು ಪರೀಕ್ಷೆಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು.

–ವಿನುತ ಮುರಳೀಧರ, ತೀರ್ಥಹಳ್ಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು