ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಬ್ಯಾಂಕ್‌ ಖಾಸಗೀಕರಣ; ಚರ್ಚೆ ಅಗತ್ಯ

Last Updated 15 ಮಾರ್ಚ್ 2021, 19:30 IST
ಅಕ್ಷರ ಗಾತ್ರ

ಎರಡು ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವ ಸಲುವಾಗಿ ಬ್ಯಾಂಕ್ ನೌಕರರು ಎರಡು ದಿನಗಳ ಮುಷ್ಕರ ಹಮ್ಮಿಕೊಂಡಿದ್ದಾರೆ. ಖಾಸಗಿ ಒಡೆತನವನ್ನು ಹೊಂದಿರುವ ಕೆಲವು ಬ್ಯಾಂಕುಗಳು ದಿವಾಳಿಯಾಗಿ ದೇಶದ ಆರ್ಥಿಕತೆಯನ್ನು ಹಾಗೂ ಜನಸಾಮಾನ್ಯರನ್ನು ತೊಂದರೆಗೀಡು ಮಾಡಿದ ನಿದರ್ಶನಗಳನ್ನು ನಾವು ಈಗಾಗಲೇ ಕಂಡಿದ್ದೇವೆ. ಹೀಗಿರುವಾಗ ಕೇಂದ್ರ ಸರ್ಕಾರವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಚಿಂತನೆಯನ್ನು ಮಾಡುತ್ತಿರುವುದು ಆಶ್ಚರ್ಯಕರ ಹಾಗೂ ವಿಷಾದಕರ.

ದೇಶದ ಆರ್ಥಿಕತೆಯ ವಿಚಾರದಲ್ಲಿ ಬ್ಯಾಂಕುಗಳು ಆಧಾರಸ್ತಂಭಗಳಿದ್ದಂತೆ. ಬ್ಯಾಂಕುಗಳನ್ನು ಖಾಸಗೀಕರಿಸುವ ನಿರ್ಧಾರದಿಂದ ಆಗಬಹುದಾದ ಅನುಕೂಲ ಹಾಗೂ ಅನನುಕೂಲಗಳನ್ನು ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸಿ, ಸಾರ್ವಜನಿಕರು ಹಾಗೂ ಬ್ಯಾಂಕ್ ನೌಕರರಿಂದ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದು ಒಳಿತೆನಿಸುತ್ತದೆ.

-ಮಹೇಶ್ ಸಿ.ಎಚ್., ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT