ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಸ್ವಾಗತಾರ್ಹ ಬೆಳವಣಿಗೆ

ಅಕ್ಷರ ಗಾತ್ರ

ಬ್ಯಾಕಿಂಗ್ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ಅವಕಾಶ ನೀಡುವ ಕೇಂದ್ರ ಸರ್ಕಾರದ ತೀರ್ಮಾನ ಸ್ವಾಗತಾರ್ಹ.

ಇದೇ ರೀತಿ, ಕೇಂದ್ರದ ಉದ್ಯೋಗದಲ್ಲಿ ಸ್ಥಳೀಯರಿಗೆ ಮೀಸಲಾತಿ ಸಿಗಬೇಕು ಎಂಬ ಬಹುದಿನಗಳ ಕನಸು ಸಹ ನನಸಾಗಬೇಕಿದೆ. ಕರ್ನಾಟಕದಲ್ಲಿ ಬ್ಯಾಂಕಿಂಗ್ ಮತ್ತು ರೈಲ್ವೆಯಲ್ಲಿ ಸ್ಥಳೀಯರಿಗೆ ಹೆಚ್ಚಾಗಿ ಅವಕಾಶಗಳು ಸಿಗುತ್ತಿಲ್ಲ. ಇದರ ಪರಿಣಾಮವಾಗಿ ಸ್ಥಳೀಯರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಅಲ್ಲದೆ, ಪರ ರಾಜ್ಯಗಳಿಂದ ಬಂದ ಉದ್ಯೋಗಿಗಳಿಗೆ ಸ್ಥಳೀಯ ಭಾಷೆ ಬಾರದ ಕಾರಣ ಗ್ರಾಹಕರ ಜೊತೆ ವ್ಯವಹರಿಸುವಾಗ ತೊಡಕಾಗುತ್ತದೆ.

ಅನೇಕ ಕಡೆ, ಬ್ಯಾಂಕ್ ಉದ್ಯೋಗಿಗಳು ಮತ್ತು ಗ್ರಾಹಕರ ನಡುವೆ ಮಾತಿನ ಚಕಮಕಿ, ಗದ್ದಲ ಆಗಿರುವುದನ್ನು ನಾವು ಕಂಡಿದ್ದೇವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸ್ಥಳೀಯರಿಗೆ ಉದ್ಯೋಗಗಳಲ್ಲಿ ಮೀಸಲಾತಿ ಒದಗಿಸುವುದು ಒಳ್ಳೆಯದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT