ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷಾಚರಣೆಗೆ ನಿರ್ಬಂಧ: ಸೂಕ್ತ ನಿರ್ಧಾರ

Last Updated 23 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಕೋವಿಡ್ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ತಡೆಯಲು ಸರ್ಕಾರವು ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿರುವುದು ಸೂಕ್ತ ನಿರ್ಧಾರವಾಗಿದೆ. ಹೊಸ ವರ್ಷದ ಸಂಭ್ರಮದ ನೆಪದಲ್ಲಿ ಯುವಜನ ಮೈಮರೆತು ಗುಂಪು ಗುಂಪಾಗಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಒಂದೆಡೆ ಸೇರಿ ಸಂಭ್ರಮಿಸುವುದು ಸಾಮಾನ್ಯ. ಓಮೈಕ್ರಾನ್‌ ಹರಡುವಿಕೆ ಕುರಿತು ಆತಂಕ ಇರುವ ಈ ಸಂದರ್ಭದಲ್ಲಿ ನಾಡಿನ ಜನರ ಸುರಕ್ಷತೆ ದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ, ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ ಮಾಡಿರುವುದು ಸರಿಯಾಗಿದೆ.

ಎರಡು ವರ್ಷಗಳಿಂದಲೂ ಕೊರೊನಾ ವೈರಸ್ಸಿನ ಅಟ್ಟಹಾಸದಿಂದ ಜನಜೀವನ ಬಸವಳಿದಿದೆ. ಇದನ್ನು ನೆನಪಿನಲ್ಲಿ ಇಟ್ಟುಕೊಂಡು ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ಸುರಕ್ಷತೆಯೊಂದಿಗೆ ಪರರ ಸುರಕ್ಷತೆಗೂ ಆದ್ಯತೆ ನೀಡಿ ಸಾಮಾಜಿಕ ಹೊಣೆಗಾರಿಕೆ ನಿರ್ವಹಿಸಬೇಕು. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಗುರುತರ ಜವಾಬ್ದಾರಿ ಪ್ರತಿಯೊಬ್ಬರದ್ದೂ ಆಗಿದೆ ಎಂಬುದನ್ನು ಮರೆಯಬಾರದು.

–ಆರ್.ಬಿ.ಜಿ.ಘಂಟಿ, ಅಮೀನಗಡ, ಬಾಗಲಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT