ಗುರುವಾರ , ಆಗಸ್ಟ್ 18, 2022
25 °C

ಭೂಮಿ ಒತ್ತುವರಿ: ತೆರೆದ ರಹಸ್ಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ನಾಗವಾರದಲ್ಲಿ ಬಿಡಿಎಗೆ ಸೇರಿದ ಸುಮಾರು ನೂರು ಕೋಟಿ ರೂಪಾಯಿ ಮೌಲ್ಯದ ಒಂದೂಕಾಲು ಎಕರೆ ಜಾಗದಲ್ಲಿ ನಿರ್ಮಿಸಲಾಗಿದ್ದ ವಾಣಿಜ್ಯ ಮಳಿಗೆಗಳನ್ನು ಇತ್ತೀಚೆಗೆ ತೆರವುಗೊಳಿಸಿದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಈ ಪ್ರಕ್ರಿಯೆಗೆ ಮೂರು ದಶಕಗಳಿಗಿಂತಲೂ ಅಧಿಕ ಸಮಯ ತಗುಲಿರುವುದು ಅಚ್ಚರಿ ಮೂಡಿಸುತ್ತದೆ. ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಗೋಪ್ಯವಾಗಿ ಉಳಿದಿಲ್ಲ.

ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಿಸಲಾದ ಕಟ್ಟಡಗಳನ್ನು ಹಲವಾರು ವರ್ಷಗಳ ಕಾಲ ಪುಕ್ಕಟೆಯಾಗಿ ಅನುಭವಿಸಲು ಬಿಟ್ಟು ತದನಂತರ ಒತ್ತುವರಿಯನ್ನು ತೆರವುಗೊಳಿಸುವ ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ಆರ್ಥಿಕ ನಷ್ಟವುಂಟಾಗುತ್ತದೆ. ಈ ನಷ್ಟವನ್ನು ಒತ್ತುವರಿದಾರರಿಂದಲೇ ವಸೂಲಿ ಮಾಡಬೇಕು ಹಾಗೂ ಒತ್ತುವರಿ ಮಾಡಲು ಸಹಕರಿಸಿದ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸಬೇಕು. ಈ ಮೂಲಕ ಸರ್ಕಾರಿ ಭೂಮಿ ಒತ್ತುವರಿಗೆ ತಡೆಯೊಡ್ಡಬೇಕು.

-ಜಿ.ನಾಗೇಂದ್ರ ಕಾವೂರು, ಸಂಡೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.