ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ದೃಷ್ಟಿ ಕಳೆದುಕೊಳ್ಳುವ ಮುನ್ನ ಕಣ್ಣು ಬಿಡಿ

Last Updated 14 ಸೆಪ್ಟೆಂಬರ್ 2020, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆಯಲ್ಲಿ ಕೊರೊನಾ ಕಾರಣದಿಂದ ಕಣ್ಣಿನ ವಿವಿಧ ಬಗೆಯ ಶಸ್ತ್ರಚಿಕಿತ್ಸೆಗಳನ್ನು ಸ್ಥಗಿತಗೊಳಿಸಿರುವುದರಿಂದ, 12 ಸಾವಿರಕ್ಕೂ ಹೆಚ್ಚು ಬಡರೋಗಿಗಳು ಶಾಶ್ವತ ಅಂಧತ್ವಕ್ಕೆ ಒಳಗಾಗುವ ಸಾಧ್ಯತೆಯು (ಪ್ರ.ವಾ., ಸೆ. 14) ಅತ್ಯಂತ ಆತಂಕಕಾರಿ. ಕೋವಿಡ್ ರೋಗಿಗಳಿಗಾಗಿ ಮೀಸಲಿರಿಸಿರುವ 100 ಹಾಸಿಗೆಗಳನ್ನು ತಕ್ಷಣವೇ ಕಣ್ಣಿನ ಶಸ್ತ್ರಚಿಕಿತ್ಸೆಗೆ ಬಳಸಲು ವೈದ್ಯಕೀಯ ಶಿಕ್ಷಣ ಇಲಾಖೆಯು ಅವಕಾಶ ಮಾಡಿಕೊಡಬೇಕು. ಕಣ್ಣಿನ ರೋಗಿಗಳ ಬಗ್ಗೆ ಅಲಕ್ಷ್ಯ ತೋರದೆ ತುರ್ತು ಕ್ರಮ ಕೈಗೊಳ್ಳಬೇಕು.

ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಗ್ರಾಮೀಣ ಪ್ರದೇಶಗಳ ರೋಗಿಗಳಿಗೆ ಅನುಕೂಲವಾಗುವಂತೆ ಅವರಿಗೆ ಸಮೀಪದ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ವಿಸ್ತರಿಸಲು ತುರ್ತಾಗಿ ಸೂಚನೆ ನೀಡಬೇಕು.

–ದಿನಮಣಿ ಬಿ.ಎಸ್.,ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT